

ಮೈಸೂರು: ಶ್ರೀ ಕ್ಷೇತ್ರ ಸುತ್ತೂರಿನಲ್ಲಿ ಜ.18 ರಿಂದ 23ರವರೆಗೆ ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಶ್ರೀ ಶಿವರಾತ್ರೀಶ್ವರ ಶಿವಯೋಗಿ ಸ್ವಾಮೀಜಿಗಳ ಜಾತ್ರಾ ಮಹೋತ್ಸವವನ್ನು (ಸುತ್ತೂರು ಜಾತ್ರೆ) ಹಮ್ಮಿಕೊಳ್ಳಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಸುತ್ತೂರು ಜಾತ್ರೆಯಲ್ಲಿ ಭಕ್ತಾದಿಗಳಿಗೆ ಪಾಲ್ಗೊಳ್ಳಲು ಅವಕಾಶ ನೀಡದೆ ಸರಳವಾಗಿ ಆಚರಿಸಲಾಯಿತು. ಈ ಬಾರಿ ಕೋವಿಡ್ ಸೋಂಕು ದೂರವಾಗಿರುವ ಹಿನ್ನೆಲೆಯಲ್ಲಿ ಜಾತ್ರೆಯಲ್ಲಿ ಭಕ್ತಾದಿಗಳು ಪಾಲ್ಗೊಳ್ಳಬೇಕು ಎಂದು ಜಾತ್ರಾ ಮಹೋತ್ಸವ ಸಮಿತಿ ಕಾಯದರ್ಶಿ ಎಸ್. ಶಿವಕುಮಾರಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.