

ವಿಜಯವಾಣಿ ಸುದ್ದಿಜಾಲ ಗದಗ
ಖಾಸಗಿ ಅನುದಾನಿತ ಸಂಸ್ಥೆಗಳಲ್ಲಿ ಕಳೆದ 9 ವರ್ಷಗಳಿಂದ ನಿವೃತ್ತಿ, ನಿಧನದಿಂದ ಖಾಲಿಯಾದ ಹುದ್ದೆಗಳನ್ನು ತುಂಬಲು ಸರ್ಕಾರ ಅನುಮತಿ ನೀಡಿಲ್ಲ. ಇದರಿಂದ ಶಿಣದ ಗುಣಮಟ್ಟದ ಮೇಲೆ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ನಿವೃತ್ತಿಯಿಂದ ಖಾಲಿ ಆದ ಹುದ್ದೆಗಳನ್ನು ತುಂಬಲು ಸರ್ಕಾರ ಅನುಮತಿ ನೀಡಬೇಕೆಂದು ಹೋರಾಟ ಮಾಡಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.
ನಗರದ ನೀರಿಣಾ ಮಂದಿರದಲ್ಲಿ ಮಾಜಿ ಸಚಿವ ಎಸ್.ಎಸ್.ಪಾಟೀಲ ಅವರ ಅಧ್ಯತೆಯಲ್ಲಿ ಮಂಗಳವಾರ ಜರುಗಿದ ಜಿಲ್ಲಾಮಟ್ಟದ ಖಾಸಗಿ ಶಿಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರ ಸಂಟನೆಗಳ ಪದಾಧಿಕಾರಿಗಳ ಸಭೆಯಲ್ಇ ಮಾತನಾಡಿದ ಅವರು, ಜು.15ರ ಒಳಗಾಗಿ ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ ಹೋರಾಟ ಸಮಿತಿ ರಚನೆ ಮಾಡಲು ನಿರ್ಣಯಿಸಲಾಗಿದೆ. ಸಭೆಗೆ ಬೆಳಗಾವಿ ವಿಭಾಗ ಮಟ್ಟದಲ್ಲಿರುವ ಕೆ.ಎಲ್.ಇ ಸಂಸ್ಥೆ ಬೆಳಗಾವಿ, ಬಿ.ಎಲ್.ಡಿ ಸಂಸ್ಥೆ ವಿಜಯಪುರ, ಬಸವೇಶ್ವರ ವಿದ್ಯಾ ಸಂಸ್ಥೆ ಬಾಗಲಕೋಟೆ, ಕನಕದಾಸ ಶಿಣ ಸಮಿತಿ ಗದಗ, ತೋಂಟದಾರ್ಯ ವಿದ್ಯಾಪಿಠ ಗದಗ, ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ನರೇಗಲ್ಲ ಸೇರಿದಂತೆ ವಿವಿಧ ಸಂಸ್ಥೆಗಳ ಮುಖ್ಯಸ್ಥರಿಗೆ ಆಹ್ವಾನ ನೀಡಲಾಗಿದೆ. ಜು. 3 ನೇ ವಾರದಲ್ಲಿ ನಡೆಯುವ ಅಧಿವೇಶನದಲ್ಲಿ ಸಿಎಂ ಹಾಗೂ ಶಿಣ ಸಚಿವರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಸರ್ಕಾರ ಸರಿಯಾದ ತೀರ್ಮಾಮ ಕೈಗೊಳ್ಳದೇ ಹೋದರೆ ಪ್ರತಿಭಟನೆ ನಡೆಸಲಾಗುವುದು ಎಂದರು.
ಸಭೆಯಲ್ಲಿ ಎಸ್.ಎಸ್. ದೇಸಾಯಿ, ಎಚ್. ಕೆ. ದಾಸರ, ಎಂ. ಡಿ. ಬಟ್ಟೂರ, ಬಿ.ಎಸ್. ಹಿರೇಮಠ, ವಿ.ಬಿ. ಶೇಷಗಿರಿ, ಅಶೋಕ ಅಂಗಡಿ, ಈರಣ್ಣ ಹಾದಿಮನಿ, ಜಿ.ಬಿ. ಗುಡಿಮನಿ ಇತರರು ಇದ್ದರು.