ಎಸ್.ವಿ ಶಾಲೆ ಬಾಲಕ-ಬಾಲಕಿಯರು ಜಿಲ್ಲಾಮಟ್ಟಕ್ಕೆ

district
ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಬಾಲಕಿಯರ ತಂಡ.
Published on

ಕುಂದಾಪುರ: ಕುಂದಾಪುರದ ಬೋರ್ಡ್ ಹೈಸ್ಕೂಲು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಪ್ರೌಢಶಾಲಾ ವಿಭಾಗದಲ್ಲಿ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಬಾಲಕ ಬಾಲಕಿಯರ ತಂಡ ಕಾಳಾವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕ ಬಾಲಕಿಯರ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಯಿತು. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಬಾಲಕ ಬಾಲಕಿಯರ ತಂಡ ನೇರವಾಗಿ ಜಿಲ್ಲಾಮಟ್ಟಕ್ಕೆ ಅರ್ಹತೆ ಪಡೆಯಿತು.

ಉಡುಪಿ ಜಿಪಂ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಿತು. ವಿಜೇತ ತಂಡಗಳಿಗೆ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಕಿರಣ್ ಹೆಗ್ಡೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ತೋಟಯ್ಯ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಾಲಾ ಹಾಗೂ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net