

ಮದ್ದೂರು: ತಾಲೂಕಿನ ಹೆಮ್ಮನಹಳ್ಳಿ ಎಸ್.ವಿ.ಎಂ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಆತಗೂರು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಾಲಿಬಾಲ್ ಮತ್ತು ಹೈ ಜಂಪ್ ಹಾಗೂ ಲಾಂಗ್ ಜಂಪ್ ಗೆಲುವು ಸಾಧಿಸುವ ಮೂಲಕ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಲೂಕಿನ ಆತಗೂರು ಹೋಬಳಿಯ ಮಲ್ಲನಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದೈಹಿಕ ಶಿಕ್ಷಣ ವಿಭಾಗ, ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಪನಕುಪ್ಪೆ ವತಿಯಿಂದ ಬುಧವಾರ ಆಯೋಜಿಸಿದ್ದ 2025-26 ನೇ ಸಾಲಿನ ಆತಗೂರು ವೃತ್ತ ಹಾಗೂ ಹೋಬಳಿ ಮಟ್ಟದ 14 ವರ್ಷ ವಯೋಮಾನದ ಬಾಲಕ, ಬಾಲಕಿಯರ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಗೆಲುವು ಸಾಧಿಸುವ ಮೂಲಕ ಗಮನ ಸೆಳೆದಿದ್ದಾರೆ.
ಬಾಲಕಿಯರ ವಾಲಿಬಾಲ್‌ನಲ್ಲಿ ಚಾರ್ವಿ, ಲಾವಣ್ಯಾ, ಶ್ರಾವಣಿ, ದರ್ಶಿನಿ, ಚೈತನ್ಯಾ, ಲೇಖನಾ, ಪೂರ್ವಿಕಾ, ರಕ್ಷಾ, ಸೈಯದಾ ಫಾತಿಮಾ ಹಾಗೂ ಯಕ್ಷ, ಬಾಲಕರ ಉದ್ದ ಜಿಗಿತದಲ್ಲಿ ಅಯಾನ್ ಪಾಶ ದ್ವಿತೀಯ, ಬಾಲಕಿಯರ ಎತ್ತರ ಜಿಗಿತದಲ್ಲಿ ಚಾರ್ವಿ 3ನೇ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾನತಾಡಿದ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ, ಹೆಮ್ಮನಹಳ್ಳಿ ಎಸ್. ವಿ .ಎಂ.ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಓದು, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅದ್ವೀತಿಯ ಸಾಧನೆ ಮಾಡುತ್ತಿರುವುದು ಸಂತೋಷ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಥೆಯ ಅಧ್ಯಕ್ಷೆ ರೂಪಾ, ತರಬೇತುದಾರ ವಿನೋದ್, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.