ಹುಕ್ಕೇರಿ ಹಿರೇಮಠದ ಶ್ರೀಗಳಿಗೆ ಸತ್ಕಾರ

IMG-20240117-WA0038.jpg
Published on

ಬೆಳಗಾವಿ: ಅಯ್ಯೋಧೆಯಲ್ಲಿ ಜ.22ರಂದು ನಡೆಯಲಿರುವ ಶ್ರೀರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಿರುವ ಸಂತಸ ಉಂಟು ಮಾಡಿದೆ ಎಂದು ಹುಕ್ಕೇರಿ ಹಿರೇಮಠ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಮಠದಲ್ಲಿ ಬುಧವಾರ ಶ್ರೀಗಳನ್ನು ಇಂಚಲದ ಶಿವಾನಂದ  ಭಾರತಿ ಸ್ವಾಮೀಜಿ, ಪಿ.ಜಿ.ಹುಣಶ್ಯಾಳದ ನಿಜಗುಣ ದೇವರು, ಹುಬ್ಬಳ್ಳಿಯ ಅಭಿನವ ಸಿದ್ಧಾರೂಢ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಬೀದರನ ಗಣೇಶಾನಂದ ಮಹಾರಾಜರು ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲೆಯ ಭಕ್ತರ, ಮಠಾಧೀಶರ ಪರವಾಗಿ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ.  ಜ.19ರಂದು ಬೆಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳಸುತ್ತಿದ್ದೇನೆ.ಈ ಭಾಗದ ಜನರಿಗೆ ಒಳಿತಾಗಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net