

ಗದಗ: ನಮ್ಮ ನಗರ ಹಾಗೂ ನೆರೆಹೊರೆಯ ಪ್ರದೇಶವನ್ನು ಸ್ವಚ್ಛವಾಗಿಡುವಲ್ಲಿ ಸ್ವಚ್ಛತಾ ಸಿಬ್ಬಂದಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ನಮ್ಮ ಯೋಗಕ್ಷೇಮ ಹಾಗು ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಇವರು ರಜೆ ತೆಗೆದುಕೊಳ್ಳದೆ ಕೆಲಸ ಮಾಡುವುದನ್ನು ನಾವು ನೋಡಿದ್ದೇವೆ. ಇವರಿಗಾಗಿಯೇ ಗದಗ-ಬೆಟಗೇರಿ ನಗರಸಬೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಪೌರ ಕಾರ್ಮಿಕರ ದಿನಾಚರಣೆ ಹಾಗೂ ಸ್ವಚ್ಛತಾ ಲೀಗ್ ಪ್ರಯುಕ್ತ ಸೆಪ್ಟೆಂಬರ್ 18 ಹಾಗೂ 19ರಂದು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. 500ಕ್ಕೂ ಹೆಚ್ಚು ಪೌರ ಕಾರ್ಮಿಕರು ಆಟೋಟ ಸ್ಪರ್ಧೆಯಲ್ಲಿ ಭಾಗುಯಾಗಿ ಸಂಭ್ರಮಿಸಿದ್ದು, ವಿಶೇಷವಾಗಿತ್ತು. ಎರಡು ದಿನಗಳ ಕಾಲ ನಡೆದ ಕ್ರೀಡಾಕುಟ ಸ್ಪರ್ಧೆಯಲ್ಲಿ ಗದಗ-ಬೆಟಗೇರರಿ ಪಾಲಿಕೆ ಸ್ವಚ್ಛತಾ ಸಿಬ್ಬಂದಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದರು.
ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ನೈರ್ಮಲ್ಯವಾಗಿಡುವ ಅವರ ಪ್ರಯತ್ನ ಸಾಮಾನ್ಯವಾಗಿ ಎಲ್ಲರ ಗಮನಕ್ಕೆ ಬರುವುದಿಲ್ಲ. ಸ್ವಚ್ಛತಾ ಪಖವಾಡವು ಆ ನಿರೂಪಣೆಯನ್ನು ಬದಲಾಯಿಸಲು ಪ್ರಯತ್ನಿಸಿತು, ಅವರ ಶ್ರಮವನ್ನು ಆಚರಿಸುವ ವೇದಿಕೆಯನ್ನು ಒದಗಿಸಿತು ಮತ್ತು ಅವರ ಕೊಡುಗೆಗಳನ್ನು ಸ್ವಚ್ಛತಾ ಲೀಗ್ ಮೂಲಕ ಗುರುತಿಸಲಾಯಿತು. ಜೊತೆಗೆ ಆರೋಗ್ಯದ ಬಗ್ಗೆ ಜಾಗೃತಿಯನ್ನು ಸಹ ಮೂಡಿಸಲಾಯಿತು.
ಕ್ರೀಡೆಯಲ್ಲಿ ಭಾಗವಹಿಸಿ ಗೆದ್ದವರಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು. ನಮ್ಮ ನೆರೆ ಹೊರೆಯನ್ನು ಸ್ವಚ್ಛವಾಗಿಡುವಲ್ಲಿ ಪ್ರಮುಖ ಪಾತ್ರ ವಹಿಸುವವರಿಗಾಗಿ ಈ ಕ್ರೀಡಾಕೂಟ ಆಯೋಜಿಸಿದ್ದು, ಎಲ್ಲರ ಗಮನ ಸೆಳೆದಿದೆ. ಈ ರೀತಿಯ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿರಬೇಕೆಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.