ಸ್ವಚ್ಛತೆ ಕಾಪಾಡುವುದು ಎಲ್ಲರ ಕರ್ತವ್ಯ: ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ ಹೇಳಿಕೆ

Swachhta He Seva Program Mandya
Published on

ಮಂಡ್ಯ: ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಶ್ರಮದಾನದಲ್ಲಿ ಮಾತನಾಡಿದ ಅವರು, ಸ್ವಚ್ಛತಾ ಹೀ ಸೇವಾ ಆಂದೋಲನದ ಪ್ರಯುಕ್ತ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಶ್ರಮದಾನ ಮಾಡಲಾಗುತ್ತಿದೆ. ಈ ಸೇವಾ ಸಪ್ತಾಹ ಅ.2ರವರೆಗೆ ನಡೆಯಲಿದೆ. ಮಹಾತ್ಮಾ ಗಾಂಧೀಜಿ ಅವರು ಸ್ವಚ್ಛತೆಗೆ ಬಹಳ ಒತ್ತು ನೀಡಿದ್ದರು. ಆದ್ದರಿಂದ ಅವರ ಆಶಯವನ್ನು ಎತ್ತಿ ಹಿಡಿಯುವ ಮೂಲಕ ನಮ್ಮ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿರಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಈ ನಿಟ್ಟಿನಲ್ಲಿ ನಮ್ಮ ಮನೆಯನ್ನು ಹೇಗೆ ಸ್ವಚ್ಛಗೊಳಿಸಿಕೊಳ್ಳುತ್ತಿವೋ ಹಾಗೆಯೇ ತಮ್ಮ ಕಚೇರಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛತೆ ಎಂಬುದು ಕೇವಲ ಒಂದು ದಿನದ ಕಾರ್ಯಕ್ರಮವಾಗದೆ. ನಮ್ಮ ದಿನ ನಿತ್ಯದಲ್ಲಿ ಒಂದು ಅವಿಭಾಜ್ಯ ಅಂಗವಾಗಬೇಕು ಎಂದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್, ಕೃಷಿ ಇಲಾಖೆಯ ಹರ್ಷ, ನಗರಸಭೆ ಪರಿಸರ ವಿಭಾಗದ ಇಂಜಿನಿಯರ್ ರುದ್ರೇಗೌಡ, ಆರೋಗ್ಯ ಪರಿವೀಕ್ಷಕ ಚೆಲುವರಾಜು, ನೆಹರು ಯುವ ಕೇಂದ್ರದ ಮುಖ್ಯಲೆಕ್ಕಾಧಿಕಾರಿ ರವಿಚಂದ್ರನ್, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತೆ ಬಿ.ಎಸ್.ಅನುಪಮಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net