

ಕಾರವಾರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛತೆಯ ಕನಸನ್ನು ನನಸು ಮಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಆಡಳಿತ ವಿಭಾಗದ ಉಪ ಕಾರ್ಯದರ್ಶಿ ಅಲ್ಲಾಭಕ್ಷ ಕರೆ ನೀಡಿದರು.
ಮಾಜಾಳಿಯ ಇಂಜಿನಿಯರಿಂಗ್ ಕಾಲೇಜ್ ವ್ಯಾಪ್ತಿಯಲ್ಲಿ ಜಿಪಂ ತಾಪಂ ಹಾಗೂ ಮಾಜಾಳಿ ಗ್ರಾಪಂ ವತಿಯಿಂದ ಬುಧವಾರ ಆಯೋಜಿಸಿದ್ದ ಸ್ವಚ್ಛ ಹೀ ಸೇವಾ-2025 ರ ಭಾಗವಾಗಿ ಜಿಲ್ಲಾ ಮಟ್ಟದ ಸ್ವಚ್ಛೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಚ್ಛತಾ ಹೀ ಸೇವಾ-2025ರ ಪ್ರತಿಜ್ಞಾವಿಯನ್ನು ಬೋಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತ ಮಾತನಾಡಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಬ್ಯಾಗ್‌ಗಳ ಬಗ್ಗೆ ಪರ್ಯಾಯ ವಸ್ತುಗಳ ಸಂಶೋಧನೆ ಬಗ್ಗೆ ಗಮನ ಕೊಡಬೇಕು ಎಂದು ಕರೆ ನೀಡಿದರು.
ಮಾಜಾಳಿ ಗ್ರಾಪಂ ಅಧ್ಯಕ್ಷೆ ಮಂಗಲಾ ಬಾಲಕೃಷ್ಣ ಕೊಠಾರಕರ್, ಜಿಪಂ ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಪ್ರಕಾಶ ಹಾಲಮ್ಮಪ್ಪನ್ನವರ್, ಯೋಜನಾ ನಿರ್ದೇಶಕ ಕರೀಂ ಅಸದಿ, ತಾಪಂ ಇಒ ವೀರನಗೌಡ ಏಗನಗೌಡರ್ ಉಪಸ್ಥಿತರಿದ್ದರು.
ವಿವಿಧ ಕಾರ್ಯಕ್ರಮಗಳು
ಸ್ವಚ್ಛೋತ್ಸವದ ಅಂಗವಾಗಿ ಅಕ್ಟೋಬರ್ 2 ರವರೆಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚಿಸಲಾಗಿದೆ. ದೊಡ್ಡ ಮಟ್ಟದ ಕಸದ ರಾಶಿಗಳನ್ನು ತೆರವು ಮಾಡುವುದು, ವಿವಿಧ ಇಲಾಖೆಗಳ ಜತೆ ಸಮನ್ವಯ ಸಾಽಸುವುದು. ಸಫಾಯಿ ಮಿತ್ರ ಸುರಕ್ಷತಾ ಶಿಬಿರಗಳನ್ನು ಆಯೋಜಿಸುವುದು, ಸಾರ್ವಜನಿಕ ಸ್ಥಳದ ಸ್ವಚ್ಛತೆ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಮಾರ್ಗ ಸೂಚಿಗಳನ್ನು ಪ್ರತಿ ಗ್ರಾಪಂಗಳಿಗೆ ಕಳಿಸಲಾಗಿದೆ.