ಕಾರ್ತಿಕ್‌ಗೆ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ

KARTHIK
Published on

ಪಾಂಡವಪುರ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ 2023-24 ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿಗೆ ತಾಲೂಕಿನ ಕನಗನಮರಡಿ ಗ್ರಾಮದ ಯುವ ಗಾಯಕ ಕಾರ್ತಿಕ್ ಭಾಜನರಾಗಿದ್ದಾರೆ.

ಕಾಲೇಜು ದಿನಗಳಿಂದಲೂ ಜನಪದ ಕಲೆ ಮೈಗೂಡಿಸಿಕೊಳ್ಳುವುದರ ಜತೆಗೆ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ಸ್ವಯಂ ಸೇವಕನಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಗಾಯಕ ನಾಗಲಿಂಗೇಗೌಡರ ಜತೆಗೂಡಿ ಹಲವಾರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಹೆಗ್ಗಳಿಕೆ ಇವರದು. ಇವರ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಒಕ್ಕೂಟ ಯುವ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಜ.20 ರಂದು ದಕ್ಷಿಣ ಕನ್ನಡ ಜಿಲ್ಲೆಯ ಕಡಬಾ ತಾಲೂಕಿನ ಸವನೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಸ್.ಬಾಲಾಜಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net