೧೨ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

9adarshkdga3
Published on

ಮಡಿಕೇರಿ: ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಜ.೧೨ ರಂದು ಅರ್ಥಪೂರ್ವವಾಗಿ ಆಯೋಜಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹಾ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಬುಧವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಜೀವನ, ತತ್ವ ಮತ್ತು ಸಂದೇಶಗಳನ್ನು ಯುವಜನತೆಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ‘ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಯುವ ಸಪ್ತಾಹ’ವನ್ನು ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಪೂರ್ವಭಾವಿಯಾಗಿ ಶಾಲಾ-ಕಾಲೇಜುಗಳಲ್ಲಿ ವಿವೇಕಾನಂದರ ಕುರಿತು ಜಿಲ್ಲೆಯ ವಿದ್ಯಾರ್ಥಿಗಳಿಗೆ ಆಶುಭಾಷಣ, ಚರ್ಚಾ, ಪ್ರಬಂಧ ಸ್ಪರ್ಧೆಗಳನ್ನು ಲೀಡ್ ಕಾಲೇಜಿನಲ್ಲಿ ನಡೆಸಿ, ವಿಜೇತ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಂದು ಬಹುಮಾನ ವಿತರಿಸುವಂತೆ ತಿಳಿಸಿದರು.

ಸಭೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಚಿತ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಯಲಕ್ಷ್ಮೀ ಬಾಯಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪಿ.ಎಸ್.ಮಚ್ಚಾಡೊ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಭವಾನಿ, ಪೊಲೀಸ್ ಇನ್ಸ್‌ಪೆಕ್ಟರ್ ನಂದಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಂಜುನಾಥ, ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net