ಸ್ವಾಮೀಜಿ ದುಸ್ಸಾಹಸಕ್ಕೆ ಮುಂದಾಗಬೇಡಿ

New BSY New
Published on

ಹುಬ್ಬಳ್ಳಿ : ಧಾರವಾಡ ಲೋಕಸಭೆ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಇದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವಾರ ಸ್ವಾಮೀಜಿ ಮುಂದಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಸೋಮವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಚುನಾವಣೆ ಸ್ಪರ್ಧೆಯ ನಿರ್ಧಾರ ಹಿಂಪಡೆಯುವಂತೆ ಈಗಾಗಲೇ ಸ್ವಾಮೀಜಿಯವರೊಂದಿಗೆ ಮಾತನಾಡಿದ್ದೇನೆ. ಮತ್ತೊಮ್ಮೆ ಅವರೊಂದಿಗೆ ರ್ಚಚಿಸಿ, ಚುನಾವಣೆ ಕಣದಿಂದ ಹಿಂದೆ ಸರಿಯಲು ವಿನಂತಿ ಮಾಡುತ್ತೇನೆ ಎಂದರು.

ರಾಜ್ಯದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇದೆ. ಪ್ರಲ್ಹಾದ ಜೋಶಿ ಅವರು ಪ್ರಭುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅವರ ಗೆಲುವಿಗೆ ಅಭಿವೃದ್ಧಿ ಕಾರ್ಯಗಳೇ ಶ್ರೀರಕ್ಷೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net