

ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ನಡೆದ ಸ್ವರಾಜ್ಯ-ಸುರಾಜ್ಯ ಕವಿಗೋಷ್ಠಿಯ ಫಲಿತಾಂಶ ಪ್ರಕಟವಾಗಿದ್ದು, ರಾಜೇಶ್ವರಿ ಬಜ್ಪೆ ಪ್ರಥಮ , ಅನಿತಾ ಶೆಟ್ಟಿ ಮೂಡುಬಿದಿರೆ ದ್ವಿತೀಯ ಹಾಗೂ ಬಾಲಕೃಷ್ಣ ಕೇಪುಳು ತೃತೀಯ ಸ್ಥಾನ ಪಡೆದಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಈ ಮೂವರು ಸೆ.3ರಂದು ಶಿರಸಿಯ ಶ್ರೀ ರಾಘವೇಂದ್ರ ಮಠ ಸಭಾಭವನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆಯಾಗಿದ್ದಾರೆ ಎಂದು ಅಭಾಸಾಪ ದ.ಕ.ಜಿಲ್ಲಾ ಸಮಿತಿಯ ಕಾರ್ಯದರ್ಶಿ ಪರಿಮಳ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
......................