ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ಜನ್ಮದಿನಾಚರಣೆ 24ರಂದು

images
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ವತಿಯಿಂದ ಸ್ವರಸಾಮ್ರಾಟ, ಪದ್ಮಭೂಷಣ ಪಂ. ಬಸವರಾಜ ರಾಜಗುರು ಅವರ 104ನೇ ಜನ್ಮದಿನಾಚರಣೆಯನ್ನು ಆ. 24ರಂದು ಸಂಜೆ 5.30 ಗಂಟೆಗೆ ಡಾ. ಅಣ್ಣಾಜಿರಾವ್ ಶಿರೂರ ರಂಗಮ0ದಿರದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಕಾರ್ಮಿಕ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಇದೇವೇಳೆ ಪಂ. ವಿನಾಯಕ ತೊರವಿ ಅವರಿಗೆ ಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು 'ರಾಷ್ಟ್ರೀಯ ಪ್ರಶಸ್ತಿ', ಡಾ. ಮೊಹಸಿನ್ ಖಾನ್ ಹಾಗೂ ಉತ್ತರ ಕನ್ನಡ ಜಿಲ್ಲೆಯ ವಿಶಾಲ ಹೆಗಡೆ ಅವರಿಗೆಸ್ವರಸಾಮ್ರಾಟ ಪಂ. ಬಸವರಾಜ ರಾಜಗುರು "ರಾಷ್ಟ್ರೀಯ ಯುವ ಪ್ರಶಸ್ತಿ' ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net