ಸ್ವರ್ಣ ಗೌರಮ್ಮ ದೇವಿ ಪ್ರತಿಷ್ಠಾಪನಾ ಮಹೋತ್ಸವ ಇಂದು

Swarnagowri
ಅರಸೀಕೆರೆ ಗ್ರಾಮಾಂತರದ ಕಣಕಟ್ಟೆ ಹೋಬಳಿಯ ಮಾಡಾಳು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಸ್ವರ್ಣ ಗೌರಮ್ಮ.
Published on

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮದ ಶ್ರೀ ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿಯ ಪ್ರತಿಷ್ಠಾಪನಾ ಮಹೋತ್ಸವ ಸೆ.6ರಂದು ಬೆಳಗ್ಗೆ 11.30ರಿಂದ ಜರುಗಲಿದೆ.


ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಮ್ಮುಖದಲ್ಲಿ ನೂತನ ದೇವಾಲಯದಲ್ಲಿ ದೇವಿ ಮೂರ್ತಿ ಪ್ರತಿಷ್ಠಾಪಿಸಲಾಗುವುದು. ಮೂಲ ಸನ್ನಿಧಿಯಲ್ಲಿ ಲಿಂಗಪೂಜೆ ನೆರವೇರಿಸಲಾಗುವುದು. ನಂತರ ಸ್ವರ್ಣ ಗೌರಮ್ಮ ದೇವಿಗೆ ಮಹಾಮಂಗಳಾರತಿ ಸಲ್ಲಿಸಿದ ಬಳಿಕ ಮಂಗಳ ಕರಡ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಸ್ವಾಮೀಜಿ ಸಮ್ಮುಖದಲ್ಲಿ ನೂತನ ದೇವಾಲಯಕ್ಕೆ ಕರೆ ತರಲಾಗುವುದು. ನಂತರ ಪೂಜೆ ಸಲ್ಲಿಸಿ ಸಿದ್ಧಪಡಿಸಿರುವ ಅಶ್ವಾರೂಢ ಪುಷ್ಪಾಲಂಕೃತ ಮಂಟಪದಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ ಈ ಸಂದರ್ಭವನ್ನು ಕಣ್ತುಂಬಿಕೊಳ್ಳಲು ತಾಲೂಕಿನ ಹಾಗೂ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಸ್ಥಾನ ಸ್ವರ್ಣ ಗೌರಮ್ಮ ದೇವಿ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎಸ್.ನಟರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net