ಮುಂಬೈ ಬಂಟರ ಸಂಘದಿಂದ ಸ್ವರ್ಣಗೌರಿ ಪೂಜೆ

marigudi
ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಪ್ರತಿಷ್ಠಾಪನಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಮುಂಬೈ ಬಂಟರ ಭವನದಲ್ಲಿ ಸ್ವರ್ಣಗೌರಿ ಸಹಿತ ಪೂಜೆ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಾರಂಭ ನಡೆಯಿತು.
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ, ಸ್ವರ್ಣ ಗದ್ದುಗೆ ಸಮರ್ಪಣೆ, ನವದುರ್ಗಾ ಲೇಖನ ಯಜ್ಞ ಮತ್ತು ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಮುಂಬೈ ಬಂಟರ ಭವನದಲ್ಲಿ ಮಂಗಳವಾರ ಸ್ವರ್ಣಗೌರಿ ಪೂಜೆ, ಸ್ವರ್ಣ ಗದ್ದುಗೆ ಸಮರ್ಪಣೆ ನಡೆಯಿತು.

ಪ್ರಧಾನ ತಂತ್ರಿ ಕೆ.ಪಿ ಕುಮಾರಗುರು ತಂತ್ರಿ ನೇತೃತ್ವದಲ್ಲಿ ಸ್ವರ್ಣ ಗೌರಿ ಪೂಜೆ ನೆರವೇರಿತು. ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸ್ವರ್ಣಗೌರಿ ಪೂಜೆ ಸಂಕಲ್ಪದ ಈಡೇರಿಕೆಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಮಹಿಳೆಯರಿಂದ ಭಜನೆ ನಡೆಯಿತು. ಮಾರಿಗುಡಿ ಅಭಿವೃದ್ಧಿ ಮುಂಬೈ ಸಮಿತಿ ಅಧ್ಯಕ್ಷ ಸುಧಾಕರ ಹೆಗ್ಡೆ ತುಂಗಾ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಬಂಜಾರ, ದಾನಿ ಆನಂದ ಶೆಟ್ಟಿ, ಗೌರವಾಧ್ಯಕ್ಷರಾದ ವಿನಯ ಕುಮಾರ್ ಸೊರಕೆ, ಲಾಲಾಜಿ ಆರ್. ಮೆಂಡನ್, ವಿಶ್ವ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿದರು.

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಸ್ವರ್ಣ ಸಮರ್ಪಣಾ ಸಮಿತಿ ಅಧ್ಯಕ್ಷ ರವಿಸುಂದರ್ ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲಬೆಟ್ಟು, ಪ್ರಮುಖರಾದ ದೇವಿಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಯೋಗೀಶ್ ಶೆಟ್ಟಿ ಬಾಲಾಜಿ, ಕೆ. ವಿಶ್ವನಾಥ್, ರತ್ನಾಕರ ಶೆಟ್ಟಿ ನಡಿಕೆರೆ ಉಪಸ್ಥಿತರಿದ್ದರು. ಅಶೋಕ್ ಪಕ್ಕಳ ನಿರೂಪಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಉದಯ ಸುಂದರ್ ಶೆಟ್ಟಿ ವಂದಿಸಿದರು.

ಜೀರ್ಣೋದ್ಧಾರದ ಮಾಹಿತಿ

ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಕಾಪು ಜೀರ್ಣೋದ್ಧಾರ ಯೋಜನೆಗಳು, ಪ್ರಗತಿ, ಸ್ವರ್ಣ ಸಮರ್ಪಣೆ, ನವದುರ್ಗಾ ಲೇಖನ ಯಜ್ಞ, ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಬಗ್ಗೆ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net