ಮಾದಕ ವ್ಯಸನದಿಂದ ವಿದ್ಯಾರ್ಥಿಗಳು ದೂರ : ಮಹಾಬಲ ರೈ ಸಲಹೆ

swasthya sankalpa
Published on

ಪುತ್ತೂರು ಗ್ರಾಮಾಂತರ: ವಿದ್ಯಾರ್ಥಿಗಳು ಮದ್ಯ, ಗಾಂಜಾ, ತಂಬಾಕು ಮೊದಲಾದ ದುಶ್ಚಟಗಳಿಗೆ ಬಲಿಯಾಗದೆ ವ್ಯಸನಗಳಿಂದ ದೂರ ಉಳಿಯಬೇಕು ಎಂದು ನಿವೃತ್ತ ಶಿಕ್ಷಕ ಮಹಾಬಲ ರೈ ಹೇಳಿದರು.

ಕುಂಬ್ರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಪುತ್ತೂರು, ಜನಜಾಗೃತಿ ವೇದಿಕೆ ಕುಂಬ್ರ ವಲಯ ಹಾಗೂ ಕುಂಬ್ರ ವಲಯದ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಆಶ್ರಯದಲ್ಲಿ, ಬುಧವಾರ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನಜಾಗೃತಿ ವೇದಿಕೆಯ ಕುಂಬ್ರ ವಲಯಾಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅಧ್ಯಕ್ಷತೆ ವಹಿಸಿದ್ದರು. ಕುಂಬ್ರದ ಕೆಪಿಎಸ್ ಕಾರ್ಯಾಧ್ಯಕ್ಷ ರಕ್ಷಿತ್ ರೈ ಮುಗೇರು ಉದ್ಘಾಟಿಸಿದರು. ಯೋಜನೆಯ ಕುಂಬ್ರ ವಲಯಾಧ್ಯಕ್ಷ ಮಾಧವ ರೈ, ಪ್ರಾಂಶುಪಾಲೆ ಶರ್ಮಿಳಾ ಗ್ಲಾಡಿನ್, ಜ್ಞ್ಞಾನ ವಿಕಾಸ ಯೋಜನೆಯ ಸಂಯೋಜಕಿ ರಾಜೀವಿ, ಸೇವಾ ಪ್ರತಿನಿಧಿ ಶಶಿಕಲಾ, ಉಪನ್ಯಾಸಕರು ಉಪಸ್ಥಿತರಿದ್ದರು.

ಪುತ್ತೂರು ತಾಲೂಕು ಯೋಜನಾಧಿಕಾರಿ ಶಶಿಧರ್ ಎಂ. ಸ್ವಾಗತಿಸಿದರು. ಉಪನ್ಯಾಸಕಿ ಹರ್ಷಿತಾ ವಂದಿಸಿದರು. ವಲಯ ಮೇಲ್ವಿಚಾರಕಿ ಮೋಹಿನಿ ಎಸ್.ಗೌಡ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net