

ಮೂಲ್ಕಿ: ಗ್ರಾಮೀಣ ಭಾಗದಲ್ಲಿ ಜನರು ಸ್ವಾವಲಂಬಿಗಳಾಗಿ ಆರೋಗ್ಯ ಹಾಗೂ ಸ್ವಚ್ಛತೆಗೆ ಗಮನಕೊಟ್ಟರೆ ಪ್ರಾದೇಶಿಕ ಅಭಿವೃದ್ಧಿ ಕಂಡುಕೊಳ್ಳಲು ಸಾಧ್ಯ ಎಂದು ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ಆಶ್ರಯದಲ್ಲಿ ಮೂಲ್ಕಿ ಮೆಡಲಿನ್ ಪ್ರೌಢಶಾಲೆಯಲ್ಲಿ ನಡೆದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ತುಳು ಸಾಹಿತ್ಯ ಅಕಾಡಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್ ಮಾಹಿತಿ ನೀಡಿದರು. ಮೂಲ್ಕಿ ಪೊಲೀಸ್ ಠಾಣೆ ಅಧಿಕಾರಿ ಯಶವಂತ್, ಜನ ಜಾಗೃತಿ ವೇದಿಕೆ ಅಧ್ಯಕ್ಷ ವಿನೋದ್ ಸಾಲ್ಯಾನ್ ಬೆಳ್ಳಾಯರು, ಮೂಲ್ಕಿ ವಲಯ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಒಕ್ಕೂಟ ಅಧ್ಯಕ್ಷೆ ಜಯಲಕ್ಷ್ಮೀ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಗಿರೀಶ್ ಎಂ., ಮೇಲ್ವಿಚಾರಕಿ ನಿಶ್ಮಿತಾ ಶೆಟ್ಟಿ, ಸೇವಾ ಪ್ರತಿನಿಧಿ ರಾಜೀವ, ಮುಖ್ಯಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.