ಭಾನುವಾರ ಸ್ವಯಂವರ ಪಾರ್ವತಿ ಯಾಗ: ಹಲಸೂರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜನೆ

Swayamvara
Published on

ಬೆಂಗಳೂರು: ನಗರದ ಹಲಸೂರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಭಾನುವಾರ (ಡಿ.24) ವಿಜಯವಾಣಿ ಹಾಗೂ ಕನ್ನಡ ಮ್ಯಾಟ್ರಿಮೊನಿ ಸಹಯೋಗದಲ್ಲಿ ‘ಸ್ವಯಂವರ ಪಾರ್ವತಿ ಯಾಗ’ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9ಕ್ಕೆ ಯಾಗ ಆರಂಭವಾಗಲಿದ್ದು, ಉಚಿತ ಪ್ರವೇಶ ಕಲ್ಪಿಸಲಾಗಿದೆ. ಇದರಲ್ಲಿ ಪಾಲ್ಗೊಂಡವರಿಗೆ ವಿವಾಹ ತೊಡಕುಗಳು ನಿವಾರಣೆಯಾಗಲಿದೆ.

ಯಾಗದಿಂದ ಕಂಕಣಬಲ: ಸ್ವಯಂವರ ಪಾರ್ವತಿ ಯಾಗದಲ್ಲಿ ಪಾಲ್ಗೊಳ್ಳುವ ಭಾವೀ ವಧು ಮತ್ತು ವರರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿ ಬರುವ ನಂಬಿಕೆಯಿದೆ. ಪುರಾಣಗಳಲ್ಲಿ ಸ್ವಯಂವರ ಮಂತ್ರೋಪದೇಶ ಹಾಗೂ ಶಿವ - ಪಾರ್ವತಿ ಯಾಗವು ಹೆಚ್ಚು ಮಹತ್ವ ಪಡೆದಿದೆ. ಪೂರ್ವಜನ್ಮದ ದೋಷಗಳಿಂದ ಮದುವೆ ವಿಳಂಬವಾಗುತ್ತಿದ್ದರೆ. ಸ್ವಯಂವರ ಹೋಮ ಮಾಡಿಸಿ, ಪ್ರಸಾದ ಸ್ವೀಕರಿಸಿದರೆ ದೋಷ ಪರಿಹಾರವಾಗುತ್ತದೆ. ಭಾವೀ ವಧು-ವರರು ಮಾತ್ರವಲ್ಲ, ಸಂಸಾರದಲ್ಲಿ ನೆಮ್ಮದಿ ಇಲ್ಲದವರೂ ಯಾಗದಲ್ಲಿ ಪಾಲ್ಗೊಳ್ಳುವ ಮೂಲಕ ಶಾಂತಿ ಹೊಂದಬಹುದಾಗಿದೆ.

ಜಾತಕ ತನ್ನಿ

ಸ್ವಯಂವರ ಪಾರ್ವತಿ ಯಾಗದಿಂದ ಜೀವನ ಸಂಗಾತಿ ಶೀಘ್ರ ದೊರಕಲು ಅನುವಾಗುತ್ತದೆ. ಯಾಗದಲ್ಲಿ ಪಾಲ್ಗೊಳ್ಳುವ ಭಾವೀ ವಧು-ವರರು ತಮ್ಮ ಭಾವಚಿತ್ರದೊಂದಿಗೆ ಜಾತಕವನ್ನು ತರುವಂತೆ ಕೋರಲಾಗಿದೆ. ಉಚಿತ ಹಾಗೂ ವಿಶೇಷ ಪೂಜೆ, ಸಂಕಲ್ಪ ಮತ್ತು ಪ್ರಸಾದಕ್ಕಾಗಿ ಮ್ಯಾಟ್ರಿ ಐಡಿಯನ್ನು ತೋರಿಸಬೇಕು.

ಪೌರಾಣಿಕ ಹಿನ್ನೆಲೆ

ಪರಮೇಶ್ವರನೊಂದಿಗೆ ಪಾರ್ವತಿ ಜಗಳ ಮಾಡಿಕೊಂಡು ಭೂಲೋಕಕ್ಕೆ ಬರುತ್ತಾಳೆ.ಆಗ ಪಾರ್ವತಿ ಮರೆತ ಶಿವನು ಏಕಾಂತಕ್ಕೆ ಹೋಗುತ್ತಾನೆ. ಇದರಿಂದ ಲಯಕಾರ್ಯಗಳೆಲ್ಲ ಅಸ್ತವ್ಯಸ್ತವಾಗುತ್ತವೆ. ಈ ಪರಿಸ್ಥಿತಿ ಅರಿತ ಋಷಿಮುನಿಗಳು ಹಾಗೂ ದೇವತೆಗಳು ಪ್ರಾರ್ಥನೆ ಮೂಲಕ ಶಿವನನ್ನು ಎಚ್ಚರಿಸಲು ಪ್ರಯತ್ನಿಸುತ್ತಾರೆ. ಇತ್ತ ಭೂಲೋಕದಲ್ಲಿದ್ದ ಪಾರ್ವತಿ, ಶಿವಲಿಂಗ ರಚಿಸಿ ತಪಸ್ಸು ಮಾಡುತ್ತಿರುತ್ತಾಳೆ. ಈ ವೇಳೆ ನಾರದರು ಆಗಮಿಸಿ ಸ್ವಯಂವರ ಮಂತ್ರ ಉಪದೇಶಿಸುತ್ತಾರೆ. ಪಾರ್ವತಿ ಈ ಮಂತ್ರವನ್ನು ಜಪಿಸಿದಾಗ ಶಿವನು ಎಚ್ಚರಗೊಂಡು ಭೂಲೋಕಕ್ಕೆ ಆಗಮಿಸುತ್ತಾನೆ. ನಂತರ ಪಾರ್ವತಿಯನ್ನು ವಿವಾಹವಾಗಿ ಕೈಲಾಸಕ್ಕೆ ಕರೆದೊಯುತ್ತಾನೆ. ಕೆಲವರಿಗೆ ಪೂರ್ವಜನ್ಮದ ಯಾವುದೋ ದೋಷಗಳು ವಿವಾಹ ಕಾರ್ಯಕ್ಕೆ ಅಡ್ಡಿ ಉಂಟು ಮಾಡುತ್ತಿರುತ್ತವೆ. ಅಂಥವರು ಪಾರ್ವತಿ ಸ್ವಯಂವರ ಹೋಮ ಮಾಡಿಸಿ, ಪ್ರಸಾದ ಸ್ವೀಕರಿಸಿದರೆ ವಿವಾಹವಾಗುತ್ತದೆ ಎಂಬ ನಂಬಿಕೆ ಇದೆ.

ಸ್ಥಳ

ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆವರಣದಲ್ಲಿನ ಕಲ್ಯಾಣ ಮಂಟಪ, ಶ್ರೀ ಮಾಂಡವ್ಯ ಮಹಾಋಷಿ ಕ್ಷೇತ್ರ, ಜೋಗುಪಾಳ್ಯ, ಹಲಸೂರು, ಬೆಂಗಳೂರು - 560008

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

ಮೊ.ನಂ. 75388 06555

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net