ಮಾಜಿ ಶಾಸಕರಿಂದ ಸ್ವೇಟರ್ ವಿತರಣೆ

appacchuranan
Published on

ಕುಶಾಲನಗರ: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ವಸತಿ ಶಾಲೆಗೆ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಶಾಲಾ ವಿದ್ಯಾರ್ಥಿಗಳಿಗೆ ಮಂಗಳವಾರ ಉಚಿತವಾಗಿ ಸ್ವೇಟರ್‌ಗಳನ್ನು ವಿತರಣೆ ಮಾಡಿದರು.

ನಂತರ ಸರಳ ಸಮಾರಂಭದಲ್ಲಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಶಿಕ್ಷಣದ ಜೊತೆಯಲ್ಲಿ ಆರೋಗ್ಯವು ಬಹುಮುಖ್ಯ, ಆರೋಗ್ಯ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಗುಡ್ಡೆಹೊಸೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಪ್ರವೀಣ್ ವಹಿಸಿದ್ದರು. ಸಭೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯೆ ಉಮಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ಕೆ.ಚಂದ್ರು, ಜಿಲ್ಲಾ ಸಂಗೊಳ್ಳಿ ರಾಯಣ್ಣ ವೇದಿಕೆ ಪ್ರಭಾಕರ್, ಪ್ರಮುಖರಾದ ಬರಮಣ್ಣ ಬೆಟ್ಟಗೆರಿ, ಸೋಮವಾರಪೇಟೆ ಶರತ್, ಸುಮೇಶ್, ಲೋಕೇಶ್, ಶಾಲಾ ಶಿಕ್ಷಕರ ವೃಂದ ಸೇರಿದಂತೆ ವಿಧ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net