

ಸಿದ್ದಾಪುರ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರು ನೀಡಿರುವ ಸ್ವೆಟರ್‌ನ್ನು ನೆಲ್ಯಹುದಿಕೇರಿಯ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಬೆಟ್ಟದ ಕಾಡು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬಿಜೆಪಿ ಶಕ್ತಿ ಕೇಂದ್ರದ ಪದಾಧಿಕಾರಿಗಳು ಶುಕ್ರವಾರ ವಿತರಿಸಿದರು.
ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಬೆಳ್ಳಿಯಪ್ಪ ಮಾತನಾಡಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಹೆಚ್ಚು ಬಡತನ ರೇಖೆಯಲ್ಲಿರುವ ವಿದ್ಯಾರ್ಥಿಗಳೇ ಆಗಿರುತ್ತಾರೆ ಅವರುಗಳ ಆರೋಗ್ಯದ ಹಿತದೃಷ್ಟಿಯಿಂದ ಸಣ್ಣ ಪ್ರಮಾಣದ ಸೇವೆಯನ್ನು ಮಾಡಲಾಗುತ್ತಿದೆ. ಅದರಂತೆಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಿ, ವಿದ್ಯಾವಂತರಾಗಿ ತಮ್ಮ ಬದುಕನ್ನು ಹಸನು ಗೊಳಿಸಿಕೊಳ್ಳುವ ಮೂಲಕ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳಲು ಮುಂದೆ ಬರಬೇಕು ಎಂದರು.
ಗ್ರಾಮ ಸಮಿತಿ ಅಧ್ಯಕ್ಷ ಸಿಯಾಬ್ ವಿಪಿಎಸ್, ಪದ್ಮನಾಭ ಮಂಡಲ ಯುವ ಮೋರ್ಚಾ ಕಾರ್ಯದರ್ಶಿ, ಅನೀಶ್ ಮಂಡಲ ಹಿಂದುಳಿದ ವರ್ಗಗಳ ಕಾರ್ಯದರ್ಶಿ, ಸದಸ್ಯ ಕಿರಣ್, ಪ್ರಮೋದ್, ಅಕ್ಷಯ್, ಬೆಟ್ಟದ ಕಾಡು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಮೀನಾಕ್ಷಿ, ಶಿಕ್ಷಕಿ ಧನಲಕ್ಷೀ, ಪುಷ್ಪಲತಾ, ಶಾಲಾ ವಿದ್ಯಾರ್ಥಿಗಳು ಪಕ್ಷದ ಕಾರ್ಯಕರ್ತರುಗಳು ಇದ್ದರು.