ಮತದಾನ ಜಾಗೃತಿಗೆ ನಗರದಲ್ಲಿ ಕಾಲ್ನಡಿಗೆ ಜಾಥಾ

mng--30 april sweep jatha 2
Published on

ಮಂಗಳೂರು: ಸಾರ್ವತ್ರಿಕ ಚುನಾವಣೆಗಳಲ್ಲಿ ಮಂಗಳೂರು ನಗರದಲ್ಲಿ ಮತದಾನ ಪ್ರಮಾಣ ಕಡಿಮೆ ಇದ್ದು, ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವಂತೆ ಜಾಗೃತಿ ಮೂಡಿಸಲು ನಗರದಲ್ಲಿ ಭಾನುವಾರ ಬೆಳಗ್ಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಯಿತು.


ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಂಗಳಾ ಕ್ರೀಡಾಂಗಣದಿಂದ ನಡೆದ ಜಾಥಾದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಮಾತನಾಡಿ, ಮೇ.10ರಂದು ನಗರದಲ್ಲಿರುವ ಅರ್ಹ ಮತದಾರರೆಲ್ಲರೂ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕು ಎಂದರು.


ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ರೋಟರಿ ಇಂಟರ್ ನ್ಯಾಷನಲ್ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್, ಅಂತಾರಾಷ್ಟ್ರೀಯ ಲಯನ್ಸ್ ಜಿಲ್ಲಾ ದ್ವಿತೀಯ ಗವರ್ನರ್ ಬಿ.ಎಂ. ಭಾರತಿ, ಅಸೋಸಿಯೇಶನ್ ಆಫ್ ಕನ್ಸಲ್ಟಿಂಗ್ ಇಂಜಿನಿಯರಿಂಗ್ ವಿಭಾಗದ ಅಧ್ಯಕ್ಷ ಸತ್ಯರಂಜನ್ ರಾವ್ ಮುಖ್ಯ ಅತಿಥಿಗಳಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net