ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಿ

Signature campaign
ಹೊಸಪೇಟೆ ತಾಲೂಕಿನ ಕಮಲಾಪುರದ ಹಂಪಿ ವಿರೂಪಾಕ್ಷೇಶ್ವರ ಪದವಿ ಕಾಲೇಜಿನಲ್ಲಿ ಮಂಗಳವಾರ ಮತದಾನದ ಜಾಗೃತಿಯ ಸಹಿ ಸಂಗ್ರಹ ಅಭಿಯಾನ ನಡೆಯಿತು.
Published on

ಹೊಸಪೇಟೆ: ಜನರಿಗೆ ಮತದಾನದ ಪ್ರಾಮುಖ್ಯತೆಯ ಅರಿವು ಮೂಡಿಸಿದಾಗ ಸದೃಡ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೇರಿದಂತೆ ಎಲ್ಲ ಯುವ ಸಮೂಹ ಸಮನ್ವಯದಿಂದ ಯುದ್ದೋಪಾದಿಯಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಕಮಲಾಪುರ ಪುರಸಭೆ ಸಿಎಒ ಮಂಜುನಾಥ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿ, ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಬುಧವಾರ ಕಮಲಾಪುರದ ಹಂಪಿ ವಿರೂಪಾಕ್ಷೇಶ್ವರ ಪದವಿ ಕಾಲೇಜಿನಲ್ಲಿ ಮಂಗಳವಾರ ಸಹಿಸಂಗ್ರಹ ಅಭಿಯಾನದಲ್ಲಿ ಮಾತನಾಡಿದರು. ಜನರಿಗೆ ಚುನಾವಣೆಯ ಹಲವಾರು ತಪ್ಪು ಕಲ್ಪನೆಗಳು ಇರುತ್ತವೆ. ಅದೇ ರೀತಿ ಅಲ್ಲಿಯ ಜನರಿಗೆ ಸರಿಯಾದ ಮಾಹಿತಿಯ ಕೊರತೆಯಿಂದ ಮತದಾನ ಮಾಡುವಲ್ಲಿ ಹಿಂದೇಟು ಹಾಕುತ್ತಿರುತ್ತಾರೆ. ಯುವಜನರು ಸಾರ್ವಜನಿಕರಿಗೆ ಮತದಾನದ ಜವಾಬ್ದಾರಿಯಿಂದ ಆಗುವ ಪ್ರಯೋಜನಗಳು, ಮಹತ್ವದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜುನ, ಕಂದಾಯಾಧಿಕಾರಿ ವಿ.ಎಸ್.ಪತ್ತಾರ್, ಜೆ.ಇ. ಹನುಮಂತಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net