ವಿದ್ಯಾರ್ಥಿಗಳಿಗೆ ಸ್ವೆಟರ್ ಕೊಡುಗೆ

01PHOTO 01
Published on

 ಸಿದ್ದಾಪುರ : ಇಲ್ಲಿನ ಪಾಲಿಬೆಟ್ಟ ಕ್ಲಸ್ಟರ್ ನ 4 ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಸ್ವೆಟರ್ ವಿತರಿಸಿದರು. ಪಾಲಿಬೆಟ್ಟ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸುಜಾ ಕುಶಾಲಪ್ಪ ಮಾತನಾಡಿ, ಕೊಡಗಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸುಮಾರು 30 ಸಾವಿರ ಸ್ವೆಟರ್‌ಗಳನ್ನು ಸ್ವಂತ ಖರ್ಚಿನಲ್ಲಿ ವಿತರಿಸಲಾಗುತ್ತಿದೆ. ಪಾಲಿಬೆಟ್ಟ ಕ್ಲಸ್ಟರ್ ವ್ಯಾಪ್ತಿಯಲ್ಲಿ 215 ಸ್ವೆಟರ್ ವಿತರಿಸಿದ್ದು, ಕೊಡಗಿನ ಹವಾಮಾನಕ್ಕೆ ಸರಿಯಾಗಿ ಸವಲತ್ತು ನೀಡಲಾಗುತ್ತಿದೆ ಎಂದರು. ಪಾಲಿಬೆಟ್ಟ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕುಟ್ಟಂಡ ಅಜಿತ್ ಕರುಂಬಯ್ಯ ಮಾತನಾಡಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಅಕ್ಟರ್ ಅಲಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೋಂಡ ವಿಜು ಸುಬ್ರಮಣಿ, ಗ್ರಾಮ ಪಂಚಾಯಿತಿ ಸದಸ್ಯ ಮಾಳೇಟಿರ ಪವಿತ್ರಾ, ಗ್ರಾ.ಪಂ ಮಾಜಿ ಅಧ್ಯಕ್ಷ ಕುಟ್ಟಂಡ ವಸಂತ, ಮುಖ್ಯ ಶಿಕ್ಷಕಿ ಸೋಫಿಯಾ, ಶಿಕ್ಷಕರಾದ ಶೀಜಾ ಜೋಸ್, ಭಾಗ್ಯವತಿ, ಲೀಲಾವತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net