

ಗೋಕಾಕ: ಗೆಳೆಯರ ಜತೆ ನದಿಗೆ ಈಜಲು ಹೋಗಿದ್ದ ಬಾಲಕನೋರ್ವ ನೀರು ಪಾಲಾದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಫರೀದ್ ಅಸ್ಲಂ ಸೌದಾಗರ (16) ಮೃತ. ಘಟಪ್ರಭಾ ನದಿಗೆ ಗೆಳೆಯರ ಜತೆ ಈಜಲು ಹೋಗಿದ್ದ.
ಈಜು ಬಾರದ ಕಾರಣ ದಡದಲ್ಲಿ ಕುಳಿತು ಸ್ನಾನ ಮಾಡುತ್ತಿದ್ದನು. ಈ ವೇಳೆ ನದಿ ನೀರಿನ ಸೆಳೆತಕ್ಕೆ ಆಯತಪ್ಪಿ ಕೊಚ್ಚಿಕೊಂಡು ಹೋಗಿದ್ದಾನೆ. ನೀರಿನ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಬಾಲಕನನ್ನು ನೋಡಿದ ಸ್ಥಳೀಯರು ರಕ್ಷಿಸಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.