

ಬೆಳಗಾವಿ: ನಗರದ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಟ್ಯಾಗೋರ್ ಪ.ಪೂ. ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಸ್ಪರ್ದೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಇಮಾನಿ ಜಾಧವ ಈಜು ಸ್ಪರ್ಧೆಯ 100 ಮೀ., 200 ಮೀ. ಬ್ಯಾಕ್ ಸ್ಟ್ರೋಕ್ ಮತ್ತು 200 ಮೀ. ಬಟ್ಟರ್ ಪ್ಲೈ ಸ್ಟ್ರೋಕ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಯಾನವಿ ಪೋರವಾಲ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯ ಡಾ.ಸಿ.ಎನ್.ನಾಯ್ಕರ ಹಾಗೂ ನಾಯ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶ್ವೇತಾ ಸಿ. ನಾಯ್ಕರ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಇದ್ದರು.