

ಮಂಗಳೂರು : ದ.ಕ. ಜಿಲ್ಲಾಡಳಿತ, ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಹಯೋಗದಲ್ಲಿ ನಗರದ ಎಮ್ಮೆಕೆರೆಯಲ್ಲಿ ನಿರ್ಮಿಸಿರುವ ಅಂತಾರಾಷ್ಟ್ರೀಯ ಈಜು ಕೊಳವನ್ನು ನ.24ರಂದು ಬೆಳಗ್ಗೆ 10ಕ್ಕೆ ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್. ಉದ್ಘಾಟಿಸಲಿದ್ದಾರೆ. ನೆರೆವರಿಸುವರು. 19ನೇ ರಾಷ್ಟ್ರೀಯ ಮಾಸ್ಟರ್ ಚಾಂಪಿಯನ್‌ಶಿಪ್ ಈಜು ಸ್ಪರ್ಧೆಯನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಈಜು ಸ್ಪರ್ಧೆಯ ಸ್ಮರಣ ಸಂಚಿಕೆಯನ್ನು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಬಿ. ನಾಗೇಂದ್ರ ಬಿಟುಗಡೆಗೊಳಿಸಲಿದ್ದಾರೆ. ಈಜುಕೊಳ ಜಿಮ್ ಕೊಠಡಿಯನ್ನು ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಲಿದ್ದಾರೆ.