

ನೆಲಮಂಗಲ : ಪ್ರಸ್ತುತ ಸಮಾಜದಲ್ಲಿ ಪತ್ರಿಕೋದ್ಯಮ ಎಂಬುದು ಕತ್ತಿಯ ಮೇಲೆ ನಡೆಯುವ ಕಾಯಕವಾಗಿದೆ ಎಂದು ನಗರಸಭೆ ಅಧ್ಯಕ್ಷ ಎನ್.ಗಣೇಶ್ ತಿಳಿಸಿದರು.
ನಗರದ ಪವಾಡ ಶ್ರೀ ಬಸವಣ್ಣ ದೇವರ ಮಠದಲ್ಲಿ ಮಂಗಳವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.
ಪತ್ರಕರ್ತರು ಸಮಾಜದ ಒಳ್ಳೆಯ ಮತ್ತು ಕೆಟ್ಟ ವಿಚಾರ ತಿಳಿಸುವ ಮೂಲಕ ಕೆಲವರಿಗೆ ನಿಷ್ಠುರರಾಗಿದ್ದಾರೆ. ಪತ್ರಕರ್ತರು ಯಾವಾಗಲೂ ಸತ್ಯದ ಪರವಾಗಿಯೇ ಕೆಲಸ ಮಾಡುವುದರಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದ ಅವರು, ವೃತ್ತಿ ಜತೆಗೆ ಆರೋಗ್ಯದ ಕಡೆಯೂ ಗಮನ ಹರಿಸಬೇಕು ಎಂದರು. ಶಾಸಕ ಎನ್. ಶ್ರೀನಿವಾಸ್ ತಾಲೂಕಿನಾದ್ಯಂತ ಪತ್ರಕರ್ತರಿಗೆ ನಿವೇಶನ ಕಲ್ಪಿಸುವ ಗುರಿ ಹೊಂದಿದ್ದು, ಮುಂದಿನ ದಿನಗಳಲ್ಲಿ ಅರ್ಹ ಪತ್ರಕರ್ತರಿಗೆ ಸೌಲಭ್ಯ ಸಿಗಲಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಪ್ರತಿಕೋದ್ಯಮದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಅಲ್ಲದೆ ಯುವ ಸಮುದಾಯವನ್ನೂ ದಾರಿ ತಪ್ಪುವಂತೆ ಮಾಡುತ್ತಿದೆ ಎಂದು ಹಿರಿಯ ಪತ್ರಕರ್ತ ಎನ್.ಉದಯ್ಕುಮಾರ್ ಕಳವಳವ್ಯಕ್ತಪಡಿಸಿದರು.
ಪ್ರತಿಯೊಬ್ಬರೂ ಪ್ರತಿಕೆ ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಪತ್ರಿಕೋದ್ಯಮದಲ್ಲಿ ಸಾಕಷ್ಟು ಆವಿಷ್ಕಾರಗಳಾಗಿದ್ದು, ಅದಕ್ಕೆ ಹೊಂದಿಕೊಂಡು ಹೋಗಬೇಕು. ಪತ್ರಿಕಾ ರಂಗ ಪ್ರಜಾಪ್ರಭುತ್ವದ ಬಲಿಷ್ಠತೆ ಹಾಗೂ ಸದೃಢ ಭಾರತ ನಿರ್ಮಾಣಕ್ಕೆ ಬಹು ಮುಖ್ಯ ಪಾತ್ರವಹಿಸುತ್ತದೆ ಎಂದರು.
ಪತ್ರಕರ್ತರು ಜೀವನ ನಿರ್ವಹಣೆಯೊಂದಿಗೆ ವೃತ್ತಿ ಮೌಲ್ಯ ಕಾಪಾಡಿಕೊಳ್ಳುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು. ಯಾವುದೇ ಟನೆಗಳು ನಡೆದಾಗ ಧೈರ್ಯದಿಂದ ಪ್ರಶ್ನೆ ಮಾಡುವ ಹಕ್ಕು ಪತ್ರಕರ್ತರಿಗೆ ಇದ್ದು, ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸದಸ್ಯ ಸಿ.ಪ್ರದಿಪ್, ಲೋಲಾಗಂಗಾಧರ್, ಭಾರತಿಬಾಯಿ, ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ, ಉದ್ಯಮಿ ಚಿಕ್ಕಹನುಮೇಗೌಡ, ಗ್ರಾಮಪಂಚಾಯಿತಿ ಸದಸ್ಯ ಹನುಮಂತರಾಜು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂ ತಾಲೂಕು ಅಧ್ಯಕ್ಷ ಬೂದಿಹಾಲ್ಕಿಟ್ಟಿ, ರಾಜ್ಯ ಸಮಿತಿ ಸದಸ್ಯೆ ಕುಸುಮಾ, ಜಿಲ್ಲಾ ಖಜಾಂಚಿ ಶಾಂತಮೂರ್ತಿ, ಜಿಲ್ಲಾ ನಿರ್ದೇಶಕ ಜಿ.ಕೆ.ಸುಗ್ಗರಾಜು, ಆನಂದ್. ರಾವೇಂದ್ರ, ಕಸಾಪ ತಾಲೂಕು ಅಧ್ಯಕ್ಷ ಪ್ರಕಾಶ್ಮೂರ್ತಿ, ಕರವೇ ಅಧ್ಯಕ್ಷ ಸುರೇಶ್, ಇನ್ನರ್ವ್ಹೀಲ್ ಮಾಜಿ ಅಧ್ಯೆ ಮಂಜುಳಾ ಸಿದ್ದರಾಜು, ಶಾರದಾ ಸುಂದರೇಶ್ ಇದ್ದರು.
ಪ್ರತಿಭಾ ಪುರಸ್ಕಾರ, ಸನ್ಮಾನ : ಎಸ್ಎಸ್ಎಲ್ಸಿ ಹಾಗೂ ದ್ವೀತಿಯ ಪಿಯುಸಿ ಸೇರಿ ಪದವಿಯಲ್ಲಿ ಅತಿ ಹೆಚ್ಚು ಅಂಕಪಡೆದ ಸಂದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ತಾಲೂಕು ಸಮಿತಿಯ ನಿಟಕಪೂರ್ವ ಪದಾಧಿಕಾರಿ ಹಾಗೂ ಜಿಲ್ಲಾ ನಿರ್ದೇಶಕರನ್ನು ಸನ್ಮಾನಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಿಂಚನಾ ಕಲಾ ತಂಡದ ಸಿದ್ದಯ್ಯ ಮತ್ತು ತಂಡ ಗೀತಗಾಯನ ನಡೆಸಿಕೊಟ್ಟರು. ಪವಾಡ ಶ್ರೀ ಬಸವಣ್ಣ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.