ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಕಾರ್ಯಾಗಾರ

SWR NEW
Published on

ಹುಬ್ಬಳ್ಳಿ : ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆ ವತಿಯಿಂದ ಹುಬ್ಬಳ್ಳಿಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಗುರುವಾರ ವಿಜ್ಞಾನ ಕಾರ್ಯಾಗಾರ ಆಯೋಜಿಸಲಾಗಿತ್ತು.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ಧಾರವಾಡದ ನಿರ್ದೇಶಕ ಡಾ. ಎಸ್.ಎಂ. ಶಿವಪ್ರಸಾದ ಅವರು ಕಾರ್ಯಾಗಾರದಲ್ಲಿ ಪಾಲ್ಗೊಂಡು, ಮಾತನಾಡಿದರು. ವಿಜ್ಞಾನದ ಮೂಲ ಪರಿಕಲ್ಪನೆಗಳ ಬಗ್ಗೆ ಮತ್ತು ಅವುಗಳ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಿಕೊಂಡು, ಅದರ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

ನೈಋತ್ಯ ರೈಲ್ವೆಯ ಮಹಿಳಾ ಕಲ್ಯಾಣ ಸಂಸ್ಥೆಯ ಅಧ್ಯಕ್ಷೆ ಡಾ. ವಂದನಾ ಶ್ರೀವಾಸ್ತವ, ಸದಸ್ಯೆ ಅನಿತಾ ಶಾಸ್ತ್ರಿ, ಪ್ರಾಚಾರ್ಯು ಶಮೀಮಬಾನು ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net