ನೈಋತ್ಯ ರೈಲ್ವೆಗೆ ರನ್ನರ್ಸ್ ಅಪ್ ಪ್ರಶಸ್ತಿ

RUNNERS UP
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಪಟಿಯಾಲದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 67ನೇ ಅಖಿಲ ಭಾರತ ರೈಲ್ವೆ ಕ್ರಿಕೆಟ್ ಚಾಂಪಿಯನ್​ಶಿಪ್​ನಲ್ಲಿ ನೈಋತ್ಯ ರೈಲ್ವೆ ಕ್ರಿಕೆಟ್ ತಂಡ ರನ್ನರ್ಸ್ ಅಪ್ ಸ್ಥಾನ ಪಡೆದಿದೆ.

ಫೈನಲ್ ಪಂದ್ಯದಲ್ಲಿ ಪೂರ್ವ ರೈಲ್ವೆ (ಕೋಲ್ಕತ್ತಾ) ಚಾಂಪಿಯನ್ ಪಟ್ಟ ಅಲಂಕರಿಸಿತು. ಟೂರ್ನಿಯಲ್ಲಿ ಫೈನಲ್ ಪ್ರವೇಶದವರೆಗೆ ನೈಋತ್ಯ ರೈಲ್ವೆ ಉತ್ತಮ ಪ್ರದರ್ಶನ ನೀಡಿತ್ತು. ತಂಡದ ರನ್ನರ್ ಅಪ್ ಸಾಧನೆಗೆ ನೈಋತ್ಯ ರೈಲ್ವೆ ಮಹಾಪ್ರಬಂಧಕ ಅರವಿಂದ ಶ್ರಿವಾಸ್ತವ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net