ಕಾನೂನು ವಿವಿಯಲ್ಲಿ ವಿಚಾರ ಸಂಕಿರಣ

Published on

ಹುಬ್ಬಳ್ಳಿ: ಇಲ್ಲಿಯ ನವನಗರದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಪ್ರಿನ್ಸಿಪಾಲ್ಸ್ ಕಾನ್ ಕ್ಲೇವ್ 2024-25 ಅಂಗವಾಗಿ ಭಾರತದಲ್ಲಿ ಕಾನೂನು ಶಿಕ್ಷಣ ಹಾಗೂ ಸವಾಲುಗಳು ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಅ. 21ರಂದು ಬೆಳಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ.

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆಯ ಪ್ರೊ. ಡಾ. ಎಂ.ಕೆ. ರಮೇಶ ಕಾರ್ಯಕ್ರಮ ಉದ್ಘಾಟಿಸುವರು. ಕುಲಪತಿ ಡಾ. ಸಿ. ಬಸವರಾಜು ಅಧ್ಯಕ್ಷತೆ ವಹಿಸುವರು.
ಕುಲಸಚಿವರಾದ ಡಾ. ರತ್ನಾ ಭರಮಗೌಡರ, ಅನುರಾಧ ವಸ್ತ್ರದ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net