ಹುಲ್ಲೇಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಟಿ.ಗೀತಾ ಅಧ್ಯಕ್ಷೆ

8bir1
Published on

ಬೀರೂರು: ಬೀರೂರು ಸಮೀಪದ ಹುಲ್ಲೇಹಳ್ಳಿ ಗ್ರಾಮದ ಹಾಸನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ಗೀತಾ, ಉಪಾಧ್ಯಕ್ಷರಾಗಿ ಚೈತ್ರ ಮಂಗಳವಾರ ಅವಿರೋಧ ಆಯ್ಕೆಯಾದರು.

ಆಡಳಿತ ಮಂಡಳಿ ಸದಸ್ಯರ ಆಯ್ಕೆಗಾಗಿ ಡಿ.22 ರಂದು ನಡೆದ ಚುನಾವಣೆಯಲ್ಲಿ ಒಂಭತ್ತು ಅಭ್ಯರ್ಥಿಗಳು ಜಯಗಳಿಸಿದ್ದರು. ಇವರಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ಸಿ.ಜಿ.ಶಿವಕುಮಾರ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಘೋಷಿಸಿದರು.

ನೂತನ ಅಧ್ಯಕ್ಷೆ ಟಿ.ಗೀತಾ ಮಾತನಾಡಿ, ಸಂಘದ ಎಲ್ಲ ಸದಸ್ಯರ ಸಹಕಾರ ಪಡೆದು ಸಂಘದ ಅಭಿವೃದ್ಧಿಗೆ ಶ್ರಮಿಸಲಾಗುವುದು. ಸಂಘದಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸಲಾಗುವುದು ಎಂದರು.

ಸಂಘದ ಕಾರ್ಯದರ್ಶಿ ಶಾಂತಮ್ಮ , ಸದಸ್ಯರಾದ ಗಂಗಮ್ಮ, ಜಯಮ್ಮ, ಲಕ್ಷ್ಮಮ್ಮ, ಪುಷ್ಪಾ, ಲಕ್ಷ್ಮಮ್ಮ, ಅನಿತಾ, ಜ್ಯೋತಿ ಮತ್ತು ಪಂಚಾಯಿತಿ ಅಧ್ಯಕ್ಷ ರುದ್ರಪ್ಪ, ಉಪಾಧ್ಯಕ್ಷ ಲಕ್ಷ್ಮಣ, ಸದಸ್ಯರಾದ ಸುರೇಶ್, ಮೂರ್ತಿ, ನರಸಿಂಹಮೂರ್ತಿ, ಹನುಮಂತಪ್ಪ ಹಾಗೂ ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net