ನೂತನ ಅಧ್ಯಕ್ಷರಾಗಿ ಟಿ.ಕೆ.ಅಶೋಕ್ ಆಯ್ಕೆ

ನೂತನ ಅಧ್ಯಕ್ಷರಾಗಿ ಟಿ.ಕೆ.ಅಶೋಕ್ ಆಯ್ಕೆ
Published on

ಶನಿವಾರಸಂತೆ: ಸಮೀಪದ ನಿಡ್ತ ಗ್ರಾಪಂ ನೂತನ ಅಧ್ಯಕ್ಷರಾಗಿ ಟಿ.ಕೆ.ಅಶೋಕ್ ಆಯ್ಕೆಯಾಗಿದ್ದಾರೆ.

ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಟಿ.ಕೆ.ಅಶೋಕ್ 7 ಮತಗಳನ್ನು ಪಡೆದು ಜಯ ಗಳಿಸಿದರು. ಪ್ರತಿಸ್ಪರ್ಧಿ ಗೋಪಾಲಪುರ ಕ್ಷೇತ್ರದ ಬಿಜೆಪಿ ಬೆಂಬಲಿತ ಸದಸ್ಯೆ ಜ್ಯೋತಿ 6 ಮತಗಳನ್ನು ಪಡೆದು ಪರಾಭವಗೊಂಡರು. ಸೋಮವಾರಪೇಟೆ ತಾಲೂಕು ತೋಟಗಾರಿಕಾ ಇಲಾಖೆ ಅಧಿಕಾರಿ ಪಣಿಂದ್ರ ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು. ಕಾಂಗ್ರೆಸ್ ಪ್ರಮುಖರಾದ ಜಿ.ಎಂ.ಕಾಂತರಾಜು, ಶರತ್‌ಶೇಖರ್ ಗ್ರಾ.ಪಂ.ಸದಸ್ಯರು ಮತ್ತು ಪಿಡಿಒ ಮಾನಸ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net