

ಮಂಡ್ಯ: ನಗರದ ರೈತ ಸಭಾಂಗಣದಲ್ಲಿ ಆ.10ರಂದು ಮಂಗಲ ಟಿ ತಿಮ್ಮೇಗೌಡ ಪ್ರತಿಷ್ಠಾನ, ಪ್ರಶಸ್ತಿ ಪ್ರದಾನ ಹಾಗೂ ವಿದ್ಯಾರ್ಥಿ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎ.ಸಿ.ರಮೇಶ್ ತಿಳಿಸಿದರು.
ಮಧ್ಯಾಹ್ನ 3.30ಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಕೊಮ್ಮೇರಹಳ್ಳಿ ಶಾಖಾ ಮಠದ ಮುಖ್ಯಸ್ಥ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನಿಧ್ಯದಲ್ಲಿ ಸರ್ಕಾರದ ವಿಶ್ರಾಂತ ಅಪರ ಮುಖ್ಯಕಾರ್ಯದರ್ಶಿ ಡಾ.ಚಿರಂಜೀವಿ ಸಿಂಗ್ ಪ್ರತಿಷ್ಠಾನವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ.ಕುಮಾರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಅಭಿನಂದನಾ ನುಡಿಯನ್ನಾಡಲಿದ್ದು, ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ, ಎಂ.ಆರ್.ಶಶಿಕಲಾ ಟಿ.ತಿಮ್ಮೇಗೌಡ ಉಪಸ್ಥಿತಿ ಇರಲಿದ್ದಾರೆ ಎಂದರು.
ಪ್ರತಿಷ್ಠಾನದ ಕಾರ್ಯದರ್ಶಿ ಕೃಷ್ಣೇಗೌಡ, ದೇವರಾಜು, ಅರುಣ್‌ಕುಮಾರ್, ಸುರೇಶ್, ಶಂಕರೇಗೌಡ, ಲಂಕೇಶ್ ಇದ್ದರು.