

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಮರ್ಕಜ್‌ನ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ದೇಶಗಳ 50 ವಿದೇಶಿಯರು ಹಾಗೂ 751 ಭಾರತೀಯರು ಸೇರಿ ಒಟ್ಟು 801 ಮಂದಿಯನ್ನು ಕರ್ನಾಟಕದಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹಕೋರ್ಟ್‌ಗೆ ಮಾಹಿತಿ ನೀಡಿದೆ.
ಬೆಂಗಳೂರಿನ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು.
ಸರ್ಕಾರದ ಪರ ವಕೀಲ ವಿಕ್ರಮ್ ಹುಯಿಲಗೋಳ್ ಲಿಖಿತ ಹೇಳಿಕೆ ಸಲ್ಲಿಸಿ, ದೆಹಲಿಯ ನಿಜಾಮುದ್ದೀನ್ ಮರ್ಕಜ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ 50 ವಿದೇಶಿ ಪ್ರಜೆಗಳನ್ನು ಈಗಾಗಲೇ ಕ್ವಾರಂಟೈನ್ ಮಾಡಲಾಗಿದೆ. ಬೆಂಗಳೂರಿನಲ್ಲಿ 269 ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 482 ಮಂದಿ ಸೇರಿ ಒಟ್ಟು 751 ಭಾರತೀಯ ಪ್ರಜೆಗಳನ್ನು ರಾಜ್ಯದಲ್ಲಿ ಕ್ವಾರಂಟೈನ್‌ನಲ್ಲಿರಿಸಲಾಗಿದೆ. ಮರ್ಕಜ್‌ಗೆ ಹೋಗಿ ಬಂದವರನ್ನು ಸ್ಥಳೀಯರ ನೆರವಿನಿಂದ ಪತ್ತೆ ಹಚ್ಚುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದು ತಿಳಿಸಿದರು.
ಇದ್ಲದೇ, ಕರ್ನಾಟಕದ 581 ತಬ್ಲಿ ಜಮಾತ್‌ನ ಸದಸ್ಯರನ್ನು ದೇಶದ ಬೇರೆ ರಾಜ್ಯಗಳಲ್ಲಿ ಪತ್ತೆ ಹಚ್ಚಲಾಗಿದ್ದು, ಈ ಸಂಬಂಧ ಆಯಾ ರಾಜ್ಯಗಳಿಗೆ ಮಾಹಿತಿ ರವಾನಿಸಲಾಗಿದೆ ಎಂದು ವಿವರಿಸಿದರು.
ಅದಕ್ಕೆ ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್, 801 ಮಂದಿ ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂದು ಸರ್ಕಾರ ಹೇಳಿದೆ. ಅವರ್ಲೆರೂ ಎಲ್ಲೆಲ್ಲಿದ್ದಾರೆ, ಯಾವ ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂಬ ಬಗ್ಗೆ ಸ್ಪಷ್ಟ ವಿವರ ಕೊಟ್ಟ್ಲಿ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಅದನ್ನು ಪರಿಗಣಿಸಿದ ಪೀಠ, ಈ ಬಗ್ಗೆ ಸಂಪೂರ್ಣ ವಿವರಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಏ.13ಕ್ಕೆ ಮುಂದೂಡಿತು.