ಪಿಡಿಒಗಳ ವಿರುದ್ಧ ಕ್ರಮಕ್ಕೆ ಒತ್ತಾಯ: ತಡಗವಾಡಿ ಗ್ರಾಪಂ ಸದಸ್ಯರ ಪ್ರತಿಭಟನೆ

Tadagawadi Gram Panchayat Members protest mandya
Published on

ಮಂಡ್ಯ: ಶ್ರೀರಂಗಪಟ್ಟಣ ತಾಲೂಕು ತಡಗವಾಡಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹಣ ದುರ್ಬಳಕೆ, ಕರ್ತವ್ಯ ಲೋಪ ಹಾಗೂ ಕಾನೂನು ಉಲ್ಲಂಘಿಸಿರುವ ಮೂವರು ಪಿಡಿಒ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗ್ರಾಪಂ ಹಾಲಿ ಮತ್ತು ಮಾಜಿ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸಿಇಒ ಅವರಿಗೆ ಮನವಿ ಸಲ್ಲಿಸಿದರು. ಗ್ರಾಪಂನಲ್ಲಿ ಪಿಡಿಒ ಆಗಿ ಕೆಲಸ ನಿರ್ವಹಿಸಿದ ಶಿವಲಿಂಗೇಗೌಡ, ತಿಲಕ್‌ಕುಮಾರ್ ಹಾಗೂ ನಾಗೇಂದ್ರ ವಿರುದ್ಧ ಕರ್ತವ್ಯ ಲೋಪ, ಹಣ ದುರ್ಬಳಕೆ ಹಾಗೂ ಕಾನೂನು ಉಲ್ಲಂಘನೆ ಮಾಡಿರುವ ಬಗ್ಗೆ ಜಿಪಂಗೆ ದೂರು ಸಲ್ಲಿಸಲಾಗಿದ್ದರೂ ಇದುವರೆಗೆ ಕ್ರಮಕ್ಕೆ ಮುಂದಾಗಿಲ್ಲ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸದಸ್ಯ ಜಿ.ಎನ್.ಮಧು, ವೆಂಕಟಮ್ಮ, ಶಾಂತಾ, ಶಿವಕುಮಾರ್, ಪರಮೇಶ್, ಆಟೋ ಕೃಷ್ಣ, ಯೋಗೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net