

ಮಡಿಕೇರಿ: ತುಮಕೂರಿನ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ೨೦೨೩-೨೪ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಟೆಕ್ವಾಂಡೋ ಪಂದ್ಯಾವಳಿಯಲ್ಲಿ ಮಡಿಕೇರಿಯ ಸಂತ ಜೋಸೆಫರ ಪಿಯು ಕಾಲೇಜ್‌ನ ಬಿ.ವಿ.ವೈಷ್ಣವಿ ಪದಕ ಗೆಲ್ಲುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜನವರಿ ತಿಂಗಳಿನಲ್ಲಿ ಮಹಾರಾಷ್ಟ್ರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ವೈಷ್ಣವಿ ಸ್ಪರ್ಧಿಸಲಿದ್ದಾರೆ. ಈಕೆ ಮಡಿಕೇರಿಯ ನಿವಾಸಿ ಮಾಜಿ ಯೋಧ ಬಿ.ಎಲ್.ವಿನೋದ್ ಕುಮಾರ್ ಹಾಗೂ ಶಿಕ್ಷಕಿ ಕೆ.ಆರ್.ಮಾಲಿನಿ ದಂಪತಿಯ ಪುತ್ರಿ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡು ತೀವ್ರ ಪೈಪೋಟಿ ನೀಡಿದ ವೈಷ್ಣವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತರಬೇತುದಾರ ಮರ್ಕರ ಟೆಕ್ವಾಂಡೋ ಕ್ಲಬ್‌ನ ಮಾಸ್ಟರ್ ಕುಶಾಲ್ ಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ.