ಕುಡಿವ ನೀರಿನ ಸಮಸ್ಯೆಗೆ ಸ್ಪಂದಿಸಿ

0104WADAGERA 01
Published on


ವಡಗೇರಾ ಪಟ್ಟಣದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ತಹಸೀಲ್ದಾರ್ ನಾಗಮ್ಮ ಭೇಟಿ


ವಿಜಯವಾಣಿ ಸುದ್ಧಿಜಾಲ ವಡಗೇರಾ
ವಡಗೇರಾ ಪಟ್ಟಣ ಸೇರಿ ತಾಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು ಎಂದು ತಹಸೀಲ್ದಾರ್ ನಾಗಮ್ಮ ಹೇಳಿದರು.
ಪಟ್ಟಣದ ಸಿಹಿ ನೀರಿನ ಬಾವಿ ಬಳಿಯ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಪಟ್ಟಣದಲ್ಲಿ ನೀರಿನ ಸಮಸ್ಯೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪಿಡಿಒ ಶರಣಗೌಡ ಅವರಿಗೆ ಸೂಚಿಸಿದರು. ತಾಲೂಕಿನಾದ್ಯಂತ ಪ್ರತಿಯೊಂದು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕುರಿತು ದೂರ ಬರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಶುದ್ಧ ಕುಡಿಯುವ ನೀರಿನ ಘಟಗಳು ದುರಸ್ತಿ ಬಗ್ಗೆ ಕ್ರಮ ವಹಿಸಬೇಕು. ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು. ಕಂದಾಯ ನಿರೀಕ್ಷಕ ಸಂಜೀವ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net