ಬೇಡಿಕೆ ಆಗ್ರಹಿಸಿ ಎರಡನೇ ಹಂತದ ಮುಷ್ಕರ

11 HNL
Published on

ಹೊನ್ನಾಳಿ: ಸರ್ಕಾರ ಗ್ರಾಮಾಡಳಿತಾಧಿಕಾರಿಗಳ ಯಾವುದೇ ಬೇಡಿಕೆಗಳನ್ನು ಈಡೇರಿಸದ ಕಾರಣ ಎರಡನೇ ಹಂತದ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಗ್ರಾಮಾಡಳಿತ ಅಧಿಕಾರಿಗಳ ತಾಲೂಕು ಅಧ್ಯಕ್ಷ ದೊಡ್ಡೇಶ್ ಹೇಳಿದರು.

ಪಟ್ಟಣದ ತಾಲೂಕು ಸೌಧದ ಮುಂಭಾಗದಲ್ಲಿ ಹಮ್ಮಿಕೊಂಡಿರುವ ಎರಡನೇ ಹಂತದ ಮುಷ್ಕರದಲ್ಲಿ ಮಾತನಾಡಿದರು.

ಕಳೆದ ವರ್ಷ ಅ.10 ರಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದು ಗ್ರಾಮಾಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಕೆಯ ಭರವಸೆ ನೀಡಿದ್ದರಿಂದ ಮೊದಲನೇ ಹಂತ ಮುಷ್ಕರವನ್ನು ಹಿಂಪಡೆಯಲಾಗಿತ್ತು. ಆದರೆ ಈವರೆಗೂ ಭೇಡಿಕೆಗಳನ್ನು ಈಡೇರಿಸದ ಕಾರಣ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದಂತೆ ಅನಿರ್ದಿಷ್ಟಾವಧಿಗೆ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಿ ಎರಡನೇ ಹಂತದ ಮುಷ್ಕರ ನಡೆಸುತ್ತಿದ್ದೇವೆ ಎಂದರು.

ರಾಜ್ಯಾದ್ಯಂತ ಆಧಾರ್ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ಮೃತ ಖಾತೆದಾರರ ಪಹಣಿ ದಾಖಲೆಗಳನ್ನು ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರಿಗೆ ಪೌತಿ ಬದಲಿಸುವ ಕಾರ್ಯಕ್ಕೆ ನಮ್ಮನ್ನು ಕೈಬಿಡಬೇಕು. ಇದರಿಂದ ತೊಂದರೆಯಾಗುತ್ತಿದೆ ಹಾಗೂ ಅಂತರ್ ಜಿಲ್ಲಾ ವರ್ಗಾವಣೆಯ ಕೆಸಿಎಸ್​ಆರ್ ನಿಯಮ 16ಎ ರ ಉಪಖಂಡ(2) ಅನ್ನು ಮರುಸ್ಥಾಪಿಸುವ ಬಗ್ಗೆ ಮಾರ್ಗಸೂಚಿಯನ್ನು ರಚಿಸಬೇಕು ಎಂದರು.

ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕದಂತೆ ಹಾಗೂ ಕಚೇರಿ ಅವಧಿಯನ್ನು ಹೊರತುಪಡಿಸಿ ಸಭೆ ಅಥವಾ ವರ್ಚುವಲ್ ಸಭೆಗಳನ್ನು ನಡೆಸದಂತೆ ಸರ್ಕಾರ ಸುತ್ತೋಲೆ ಹೊರಡಿಸಿದ ನಂತರವೂ ಜಿಲ್ಲೆಗಳಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸುತ್ತಿರುವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ತಹಸೀಲ್ದಾರ್ ಪಟ್ಟರಾಜಗೌಡ ಮಾತನಾಡಿ, ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕೊಟ್ಟಿರುವ ಮನವಿಪತ್ರವನ್ನು ಸರ್ಕಾರಕ್ಕೆ ತಲುಪಿಸುತ್ತೇವೆ ಎಂದು ಭರವಸೆ ನೀಡಿದರು.

ಉಪಾಧ್ಯಕ್ಷ ಅಶೋಕ್​ನಾಯ್್ಕ ಪ್ರಧಾನ ಕಾರ್ಯದರ್ಶಿ ಉಮೇಶ್, ಖಜಾಂಚಿ ಸಂತೋಷಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ನಾಗರಾಜ್ ನಾಯ್್ಕ ಧರ್ಮಪ್ಪ, ಬಸವರಾಜು, ಪ್ರಶಾಂತ್, ಬಸವರಾಜು, ಶಿಲ್ಪ, ಅಶ್ವಿನಿ, ರೇಣುಕಾ, ಅನಿತಾ, ಮಂಜಪ್ಪ, ಭರಮಪ್ಪ, ನಾಗರಾಜು, ಸುರೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net