

ಪಡುಬಿದ್ರಿ: ಕಾಪು ತಾಲೂಕಿನ ಬೆಳಪು ಗ್ರಾಮದ ಸರ್ಕಾರಿ ಜಾಗದಲ್ಲಿ ವಾಸಿಸುವ ಬಡವರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಗ್ರಾಪಂ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಸಲ್ಲಿಸಿದ ಮನವಿಗೆ ಸ್ಪಂದಿಸಿರುವ ತಹಸೀಲ್ದಾರ್ ಪ್ರತಿಭಾ ಆರ್. ಇಲಾಖೆಯ ಅಧಿಕಾರಿಗಳೊಂದಿಗೆ ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.
ಜನನಿಬಿಡ ಪ್ರದೇಶ ಇದಾಗಿದ್ದು ಪೇಟೆಗೆ ತಾಗಿಕೊಂಡಿರುವ ಜಾಗದಲ್ಲಿ ಬಹಳ ವರ್ಷಗಳಿಂದ ವಾಸಿಸುವ ಜನರ ಅಹವಾಲು ಸ್ವೀಕರಿಸಿದ ತಹಸೀಲ್ದಾರ್ ಹಕ್ಕುಪತ್ರ ನೀಡದಿರುವ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿ ಮೇಲಧಿಕಾರಿಗಳೊಂದಿಗೆ ಹಾಗೂ ಅರಣ್ಯ ಇಲಾಖೆ ಜತೆ ಚರ್ಚಿಸಿ ಶ್ರೀದಲ್ಲೇ ಹಕ್ಕುಪತ್ರ ನೀಡುವ ಭರವಸೆ ನೀಡಿದರು.