ಬೆಟ್ಟದಪುರ ರಾಗಿ ಖರೀದಿ ಕೇಂದ್ರಕ್ಕೆ ತಹಸೀಲ್ದಾರ್ ಭೇಟಿ

ಬೆಟ್ಟದಪುರ ಎಪಿಎಂಸಿ ಆವರಣದಲ್ಲಿ ತೆರೆದಿರುವ ರಾಗಿ ಖರೀದಿ ಕೇಂದ್ರಕ್ಕೆ ತಹಸೀಲ್ದಾರ್ ನಿಸರ್ಗ ಪ್ರಿಯಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಣ್ಣಸ್ವಾಮಿ, ಎಂ.ಆರ್.ಮಂಜುನಾಥ್, ಲೋಕನಾಥ್ ಇದ್ದರು.
ಬೆಟ್ಟದಪುರ ಎಪಿಎಂಸಿ ಆವರಣದಲ್ಲಿ ತೆರೆದಿರುವ ರಾಗಿ ಖರೀದಿ ಕೇಂದ್ರಕ್ಕೆ ತಹಸೀಲ್ದಾರ್ ನಿಸರ್ಗ ಪ್ರಿಯಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಣ್ಣಸ್ವಾಮಿ, ಎಂ.ಆರ್.ಮಂಜುನಾಥ್, ಲೋಕನಾಥ್ ಇದ್ದರು.
Published on

ಬೆಟ್ಟದಪುರ: ಇಲ್ಲಿನ ಎಪಿಎಂಸಿ ಆವರಣದಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರಕ್ಕೆ ತಹಸೀಲ್ದಾರ್ ಜೆ.ನಿಸರ್ಗಪ್ರಿಯಾ ಭೇಟಿ ನೀಡಿ ಪರಿಶೀಲಿಸಿದರು.

ರಾಗಿಯ ಗುಣಮಟ್ಟ, ಖರೀದಿ ಪ್ರಕ್ರಿಯೆ ಸೇರಿದಂತೆ ಇತರ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರೀದಿ ಕೇಂದ್ರದಲ್ಲಿ ಅಧಿಕಾರಿಗಳು ಗುಣಮಟ್ಟದ ರಾಗಿಯನ್ನು ಖರೀದಿ ಮಾಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು. ನಿಯಮಾನುಸಾರ ಖರೀದಿ ಪ್ರಕ್ರಿಯೆ ನಡೆಸಬೇಕು. ಖರೀದಿಗೆ ಸಂಬಂಧಿಸಿದಂತೆ ಇರುವ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ನೋಟಿಸ್ ಬೋರ್ಡ್‌ನಲ್ಲಿ ಪ್ರಕಟಣೆ ಮಾಡಬೇಕು ಎಂದು ಸೂಚಿಸಿದರು.

ಗುತ್ತಿಗೆದಾರ ಎಂಬುದು ತಿಳಿದಿಲ್ಲ. ಸರ್ಕಾರದಿಂದ ಎಷ್ಟು ಹಣ ಬರಲಿದೆ, ಕೂಲಿ ಎಷ್ಟು ಎಂಬುದೂ ತಿಳಿಯುತ್ತಿಲ್ಲ. ಯಾರು ಸರಿಯಾಗಿ ಮಾಹಿತಿ ಕೊಡುತ್ತಿಲ್ಲ ಎಂದು ಗುತ್ತಿಗೆದಾರನ ವಿರುದ್ಧ ಕೂಲಿಯವರು (ಲೋಡರ್ಸ್) ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ತಹಸೀಲ್ದಾರ್, ಗುತ್ತಿಗೆದಾರರನ್ನು ರಾಗಿ ಖರೀದಿ ಕೇಂದ್ರಕ್ಕೆ ಕರೆಸುವ ಕೆಲಸವನ್ನು ನೀವುಗಳು ಮಾಡಬೇಕು. ನಿಮ್ಮ ಸಮಸ್ಯೆಯನ್ನು ಅವರೇ ಬಗೆಹರಿಸಬೇಕಿದೆ. ಈ ಸಂಬಂಧ ನಾನೂ ಚರ್ಚಿಸಿ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

ತಾಲೂಕು ಆಹಾರ ಶಿರಸ್ತೇದಾರ್ ಸಣ್ಣಸ್ವಾಮಿ, ನೀರಿಕ್ಷಕ ಎಂ.ಆರ್.ಮಂಜುನಾಥ್, ರಾಗಿ ಖರೀದಿ ಕೇಂದ್ರದ ಅಧಿಕಾರಿ ಲೋಕನಾಥ್ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net