ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

15
Published on

ಬೆಳ್ತಂಗಡಿ: ಸೇವಾಭಾರತಿ ಕನ್ಯಾಡಿ ಘಟಕ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಅರಸಿನಮಕ್ಕಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಮಹಿಳಾ ಒಕ್ಕೂಟ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ ನೇಲ್ಯಡ್ಕದಲ್ಲಿ ನಡೆಯಿತು.

ಬೆಳ್ತಂಗಡಿ ಕೌಶಲ ಎನ್‌ಆರ್‌ಎಲ್‌ಎಂ ಮೇಲ್ವಿಚಾರಕಿ ವೀಣಾಶ್ರೀ ಕೆ ಕೆ. ತರಬೇತಿ ಶಿಬಿರ ಉದ್ಘಾಟಿಸಿದರು. ಸೇವಾಭಾರತಿ ಕನ್ಯಾಡಿ ಅಧ್ಯಕ್ಷೆ ಸ್ವರ್ಣಗೌರಿ, ಅರಸಿನಮಕ್ಕಿ ಗ್ರಾಪಂ ಅಧ್ಯಕ್ಷೆ ಗಾಯತ್ರಿ, ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ ಅಧ್ಯಕ್ಷೆ ಪ್ರತಿಮಾ, ನೇಲ್ಯಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಸಂತಿ ಕೆ, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಖಜಾಂಚಿ ಬಬಿತಾ, ಟೈಲರಿಂಗ್ ತರಬೇತುದಾರರು ಹರಿಣಾಕ್ಷಿ ಬಿ.ಪಿ., ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೇಲ್ಯಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಭವಾನಿ, ಸ್ಥಳೀಯ ಸಂಪನ್ಮೂಲ ವ್ಯಕ್ತಿ ಅಮಿತಾ, ಕೃಷಿ ಉದ್ಯೋಗ ಗೀತಾ, ಪಶು ವೇದಾವತಿ ಉಪಸ್ಥಿತರಿದ್ದರು. ಮುಖ್ಯ ಪುಸ್ತಕ ಬರಹಗಾರ್ತಿ ನೀತಾ ಸ್ವಾಗತಿಸಿದರು. ಸೇವಾಭಾರತಿಯ ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಕೋ-ಆರ್ಡಿನೇಟರ್ ಸುಮಾ ನಿರೂಪಿಸಿದರು. ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹೇಮಲತಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net