ಸೂಲಿಬೆಲೆ, ಕೆರೆಹಳ್ಳಿ ವಿರುದ್ಧ ಕ್ರಮಕೈಗೊಳ್ಳಿ

congress manavi
ಕಾಂಗ್ರೆಸ್‌ನ ಹಿಂದುಳಿದ ವರ್ಗದ ಕಾರ್ಯಕರ್ತರು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಇಕ್ಕೇರಿ ರಮೇಶ್, ಕುಮಾರ್, ರಾಘವೇಂದ್ರ, ಪ್ರಶಾಂತ್, ದಿವಾಕರ್, ಧರ್ಮರಾಜ್, ಮಂಜು, ಡಾ. ತಾನಾಜಿ, ಗಾಜನೂರು ನಾಗರಾಜ್ ಇದ್ದರು.
Published on

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಹೀಯ್ಯಳಿಸಿರುವ ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಮತ್ತು ಪುನೀತ್ ಕೆರೆಹಳ್ಳಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ನ ಹಿಂದುಳಿದ ವರ್ಗದ ಕಾರ್ಯಕರ್ತರು ಮಂಗಳವಾರ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌ಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಕುರಿತು ಕಳೆದ ಕೆಲ ದಿನಗಳ ಹಿಂದೆ ಚಕ್ರವರ್ತಿ ಸೂಲಿಬೆಲೆ ಅವರು ನೀಡಿರುವ ಹೇಳಿಕೆ ಶಾಲಾ ಮಕ್ಕಳಲ್ಲಿ ಧಾರ್ಮಿಕ ಪ್ರತಿಕೂಲ ಪರಿಣಾಮ ಬೀರುವಂತಾಗಿದೆ. ಸಮಾಜದ ಸ್ವಾಸ್ಥೃಕ್ಕೆ ಭಂಗ ತರುವಂತೆ ಮಾತನಾಡಿದ್ದಾರೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಎರಡು ಪರೀಕ್ಷೆಗಳು ಒಟ್ಟಿಗೆ ಇರುವುದರಿಂದ ಬೆಳಗ್ಗೆ ಮತ್ತು ಮಧ್ಯಾಹ್ನ ವಿಭಾಗ ಮಾಡಲಾಗಿದೆ. ಆದರೆ ಅದನ್ನು ಅವರು ನೋಡುವ ರೀತಿ ಬೇರೆಯಾಗಿದೆ ಎಂದು ದೂರಿದರು.
ಸಾಮಾಜಿಕ ಜಾಲತಾಣಗಳಲ್ಲಿ ಪುನೀತ್ ಕೆರೆಹಳ್ಳಿ ಎಂಬಾತ ಮಧು ಬಂಗಾರಪ್ಪ ಅವರ ಬಗ್ಗೆ ಏಕವಚನ ಮತ್ತು ತುಚ್ಛ ಶಬ್ಧಗಳಿಂದ ಅವಹೇಳನಕಾರಿಯಾಗಿ ಮಾತನಾಡಿದ್ದು, ಇಬ್ಬರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದರು.
ಪ್ರಮುಖರಾದ ಇಕ್ಕೇರಿ ರಮೇಶ್, ಕುಮಾರ್, ರಾಘವೇಂದ್ರ, ಪ್ರಶಾಂತ್, ದಿವಾಕರ್, ಧರ್ಮರಾಜ್, ಮಂಜು, ಡಾ. ತಾನಾಜಿ, ಗಾಜನೂರು ನಾಗರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net