ದುರ್ವರ್ತನೆ ತೋರಿದ ಅಕಾರಿ ವಿರುದ್ಧ ಕ್ರಮಕೈಗೊಳ್ಳಿ

10-01-Shiva-4
ಶಾಸಕ ದುರ್ಯೋಧನ ಐಹೋಳೆ ವಿರುದ್ಧ ಬೇಜವಾಬ್ದಾರಿಯಿಂದ ಮಾತನಾಡಿರುವ ಅರಣ್ಯ ಇಲಾಖೆ ಅಕಾರಿಯನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ರಾಯಚೂರಿನ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶಗೆ ಬಿಜೆಪಿ ಎಸ್ಸಿ ಮೋರ್ಚಾದಿಂದ ಬುಧವಾರ ಮನವಿ ಸಲ್ಲಿಸಲಾಯಿತು. ನಗರ ಘಟಕದ ಅಧ್ಯಕ್ಷ ಭೀಮಣ್ಣ ಮಂಚಾಲ, ಮುಖಂಡರಾದ ರವೀಂದ್ರ ಜಲ್ದಾರ್, ತಿಮ್ಮಪ್ಪ ಫಿರಂಗಿ, ಎನ್.ಕೆ.ನಾಗರಾಜ, ಸುಭಾಷ ಅಸ್ಕಿಹಾಳ, ಶಂಶಾಲಂ, ವೌನೇಶ, ಶಂಕ್ರಪ್ಪ ಹೊಸೂರು, ಚಂದ್ರು ಭಂಡಾರಿ, ಮಲ್ಲಿಕಾರ್ಜುನ ಇದ್ದರು.
Published on

ರಾಯಚೂರು: ಬೆಳಗಾವಿ ಜಿಲ್ಲೆಯ ರಾಯಬಾಗ್ ಶಾಸಕ ದುರ್ಯೋಧನ ಐಹೋಳೆ ವಿರುದ್ಧ ಬೇಜವಾಬ್ದಾರಿತನದಿಂದ ವರ್ತಿಸಿರುವ ಅರಣ್ಯ ಇಲಾಖೆ ಅಕಾರಿಯನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಬಿಜೆಪಿ ಎಸ್ಸಿ ಮೋರ್ಚಾದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶಗೆ ಮನವಿ ಸಲ್ಲಿಸಿ, ಅರಣ್ಯಾಕಾರಿ ಚುನಾಯಿತ ಜನಪ್ರತಿಯೊಂದಿಗೆ ಯಾವ ರೀತಿ ವರ್ತಿಸಬೇಕು ಎಂಬ ಪರಿಜ್ಞಾನವಿಲ್ಲದೆ ಏಕವಚನದಲ್ಲಿ ಶಾಸಕರೊಂದಿಗೆ ಮಾತನಾಡಿ ಅವಮಾನ ಮಾಡಿದ್ದಾರೆ ಎಂದು ದೂರಿದರು.
ಸರ್ಕಾರಕ್ಕೆ ಅಕಾರಿಗಳ ಮೇಲೆ ಹಿಡಿತವಿಲ್ಲದಂತಾಗಿದ್ದು, ವಿರೋಧ ಪಕ್ಷದ ಶಾಸಕರ ಹಕ್ಕನ್ನು ಕಸಿದುಕೊಳ್ಳಲು ಹಿಂಭಾಗಿಲಿಂದ ಸರ್ಕಾರಿ ಅಕಾರಿಗಳಿಗೆ ಪ್ರಚೋದನೆ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕೂಡಲೇ ಅರಣ್ಯ ಇಲಾಖೆ ಅಕಾರಿಯನ್ನು ಸೇವೆಯಿಂದ ವಜಾಗೊಳಿಸಿ, ಕಾನೂನು ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ನಗರ ಘಟಕದ ಅಧ್ಯಕ್ಷ ಭೀಮಣ್ಣ ಮಂಚಾಲ, ಮುಖಂಡರಾದ ರವೀಂದ್ರ ಜಲ್ದಾರ್, ತಿಮ್ಮಪ್ಪ ಫಿರಂಗಿ, ಎನ್.ಕೆ.ನಾಗರಾಜ, ಸುಭಾಷ ಅಸ್ಕಿಹಾಳ, ಶಂಶಾಲಂ, ವೌನೇಶ, ಶಂಕ್ರಪ್ಪ ಹೊಸೂರು, ಚಂದ್ರು ಭಂಡಾರಿ, ಮಲ್ಲಿಕಾರ್ಜುನ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net