ಯಾತ್ರೆಗೆ ಅಡ್ಡಿಪಡಿಸಿದವರ ವಿರುದ್ಧ ಕ್ರಮಕೈಗೊಳ್ಳಿ

23-01-Shiva-1
ಭಾರತ್ ಜೋಡೋ ಯಾತ್ರೆಗೆ ಅಡ್ಡಿಪಡಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ನಗರಸಭೆ ಸದಸ್ಯರಾದ ಜಯಣ್ಣ, ಬಸವರಾಜ ಪಾಟೀಲ್ ದರೂರ, ಪಕ್ಷದ ಮುಖಂಡರಾದ ಪಾರಸಮಲ್ ಸುಖಾಣಿ, ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ, ಜಿ.ಶಿವಮೂರ್ತಿ, ಶ್ರೀನಿವಾಸ ಪೋತಗಲ್, ಅರುಣ್ ದೋತರಬಂಡಿ, ನಾಗವೇಣಿ ಪಾಟೀಲ್, ನಿರ್ಮಲಾ ಬೆಣ್ಣಿ, ಶಶಿಕಲಾ ಭೀಮರಾಯ ಇದ್ದರು.
Published on

ರಾಯಚೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂ ಹಮ್ಮಿಕೊಂಡಿರುವ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿ ಪಡಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಅಸ್ಸಾಂನಲ್ಲಿ ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವಾಗ ರಾಹುಲ್‌ಗಾಂ ತೆರಳುತ್ತಿದ್ದ ಬಸ್ ಅಡ್ಡಗಟ್ಟಿ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿ ಹಲ್ಲೆಗೆ ಮುಂದಾಗಿದ್ದಾರೆ. ಅಸ್ಸಾಂನಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದ್ದು, ಯಾತ್ರೆ ಉದ್ದಕ್ಕೂ ಅಸ್ಸಾಂ ಸಿಎಂ ಗುಂಡಾಗಳ ಮೂಲಕ ದಾಳಿ ನಡೆಸಿದ್ದಾರೆ.
ಯಾತ್ರೆಗೆ ಅಡ್ಡಿ ಪಡಿಸುವುದರ ಜತೆಗೆ ಶಂಕರ ದೇವಾಲಯಕ್ಕೆ ರಾಹುಲ್ ಗಾಂ ಪ್ರವೇಶ ನಿರಾಕರಿಸಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿ ಪ್ರವೇಶ ನಿರಾಕರಿಸುವ ಮೂಲಕ ತಾರತಮ್ಯ ನೀತಿಯನ್ನು ಅನುಸರಿಸಿದೆ. ಶಾಂತಿಯುತ ಯಾತ್ರೆಗೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸುವ ಮೂಲಕ ಅಶಾಂತಿ ಸೃಷ್ಟಿಸಲು ಮುಂದಾಗಿದ್ದಾರೆ.
ಕೂಡಲೇ ಯಾತ್ರೆಗೆ ಅಡ್ಡಪಡಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಶಂಕರ ದೇವಾಲಯದ ಪ್ರವೇಶಕ್ಕೆ ನಿರಾಕರಿಸಿ ದೇವಸ್ಥಾನ ಆಡಳಿತ ಮಂಡಳಿಯನ್ನು ವಜಾಗೊಳಿಸಬೇಕು ಎಂದು ಪಕ್ಷದ ಕಾರ್ಯಕರ್ತರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯರಾದ ಜಯಣ್ಣ, ಬಸವರಾಜ ಪಾಟೀಲ್ ದರೂರ, ಪಕ್ಷದ ಮುಖಂಡರಾದ ಪಾರಸಮಲ್ ಸುಖಾಣಿ, ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ, ಜಿ.ಶಿವಮೂರ್ತಿ, ಶ್ರೀನಿವಾಸ ಪೋತಗಲ್, ಅರುಣ್ ದೋತರಬಂಡಿ, ನಾಗವೇಣಿ ಪಾಟೀಲ್, ನಿರ್ಮಲಾ ಬೆಣ್ಣಿ, ಶಶಿಕಲಾ ಭೀಮರಾಯ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net