

ಎನ್.ಆರ್.ಪುರ: ಹಿಂದು ಧರ್ಮವನ್ನು ಅವಹೇಳನ ಮಾಡಿದ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿಹಿಂಪ ಪದಾಧಿಕಾರಿಗಳು ಪಿಎಸ್‌ಐ ಶ್ರೀಗುರು ಸಜ್ಜನ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹಿಂದು ಧರ್ಮವನ್ನು ಮಾರಕ ಕಾಯಿಲೆಗಳಿಗೆ ಹೋಲಿಸಿ ಅವಮಾನ ಮಾಡಿದ್ದಾರೆ. ಹಿಂದುಗಳ ಧಾರ್ಮಿಕ ಭಾವನೆಗೆ ಉದ್ದೇಶಪೂರ್ವಕವಾಗಿ ಘಾಸಿಗೊಳಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ. ವಿಹಿಂಪ ಜಿಲ್ಲಾಧ್ಯಕ್ಷ ಕೆ.ಪಿ.ಸುರೇಶ್‌ಕುಮಾರ್, ಪದಾಧಿಕಾರಿಗಳಾದ ಅಭಿಷೇಕ್, ದರ್ಶನ್ ಆಚಾರ್ಯ, ಅರುಣ್‌ಕುಮಾರ್ ಜೈನ್ ಇತರರಿದ್ದರು.