

ಮೈಸೂರು: ಜಿಲ್ಲೆಯಲ್ಲಿರುವ ಅಧಿಕೃತವಾಗಿ ನೋಂದಾಯಿಸಿರುವ ಹೋಂಸ್ಟೇಗಳ ಪಟ್ಟಿಯನ್ನು ಪಡೆದು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳನ್ನು ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯಿತಿಯ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅನಧಿಕೃತ ಹೋಂಸ್ಟೇಗಳು ಹೆಚ್ಚಾಗುತ್ತಿದ್ದು, ಅದರ ಬಗ್ಗೆ ಅಧಿಕಾರಿಗಳು ವರದಿ ಪಡೆದು ಕ್ರಮ ಕೈಗೊಳ್ಳಬೇಕು ಎಂದರು.