ಯೂರಿಯಾ ಗೊಬ್ಬರ ವಿತರಣೆಗೆ ಕ್ರಮ ಕೈಗೊಳ್ಳಿ; ರೈತರ ಆಗ್ರಹ

28-RNR-03
Published on

ರಾಣೆಬೆನ್ನೂರ: ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರಿಗೆ ಸೂಕ್ತ ರೀತಿಯಲ್ಲಿ ಯೂರಿಯಾ ಗೊಬ್ಬರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಹಸೀಲ್ದಾರ್​ ಆರ್​.ಎಚ್​. ಭಾಗವಾನ್​ ಮೂಲಕ ಸೋಮವಾರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರೈತ ಸಂದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ಕೃಷಿ ಸಚಿವರು ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆಯಿಲ್ಲ ಎಂದು ಹೇಳುತ್ತಿದ್ದಾರೆ. ಮತ್ತೊಂದೆಡೆ ಸಿಎಂ ಸಿದ್ದರಾಮಯ್ಯ ಯೂರಿಯಾ ಗೊಬ್ಬರ ಕೊಡುವಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ$್ಯ ವಹಿಸಿದೆ ಎಂದು ಹೇಳುತ್ತಿದ್ದಾರೆ. ಇದರಲ್ಲಿ ಯಾವುದು ಸರಿ ಎಂಬುದು ರೈತರಿಗೆ ಗೊಂದಲ ಉಂಟಾಗಿದೆ.

ಅಲ್ಲದೆ ತಾಲೂಕಿನಲ್ಲಿ ಯೂರಿಯಾ ಗೊಬ್ಬರ ಸರಿಯಾಗಿ ದೊರೆಯುತ್ತಿಲ್ಲ. ರೈತರು ದಿನಗಟ್ಟಲೇ ಯೂರಿಯಾ ಗೊಬ್ಬರಕ್ಕಾಗಿ ಸೊಸೈಟಿಗಳ ಎದುರು ಕಾಯ್ದು ನಿಲ್ಲುವಂತಾಗಿದೆ. ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆಗಳಿಗೆ ಯೂರಿಯಾ ಗೊಬ್ಬರದ ಅವಶ್ಯಕತೆಯಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಮುಖರಾದ ಸೋಮರೆಡ್ಡಿ ಹಾದಿಮನಿ, ರಘು ಗೋಕರ, ಮಲ್ಲಿಕಾರ್ಜುನ ಅಡಿವೆಪ್ಪನವರ, ನಾಗಪ್ಪ ಕರೂರ, ಮಲ್ಲಿಕಾರ್ಜುನ ತೆಗ್ಗಿನ, ಸಂತೋಷಕುಮಾರ ಮುದ್ದಿ, ಮಂಜಪ್ಪ ಬಸನಗೌಡ, ತಿಮ್ಮಣ್ಣ ಮುದಕಣ್ಣನವರ, ಶಿವರಾಜ ಭಜಂತ್ರಿ, ಪ್ರಕಾಶ ಹೊಸದುರ್ಗಣ್ಣನವರ, ಪ್ರದಿಪ ಹಂಚಿನಮನಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net