ಕಾಡಾನೆ ನಿಯಂತ್ರಣಕ್ಕೆ ಕ್ರಮ ಜರುಗಿಸಿ

09Kush01
ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಚಿನ್ನೇನಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿ ನಡೆದ ಸ್ಥಳದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಾಸುದೇವ ಮೇಟಿ ಬಣದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಜಿಲ್ಲಾ ಅಧ್ಯಕ್ಷ ಎಚ್.ಜೆ.ಶರತ್, ಪುಟ್ಟೇಗೌಡ, ಉಪಾಧ್ಯಕ್ಷ ಪ್ರಸನ್ನ ರೆಡ್ಡಿ, ಗೌರವಾಧ್ಯಕ್ಷ ಚಂದ್ರಣ್ಣ, ಕೊಡಗು-ಮೈಸೂರು ಜಿಲ್ಲಾ ಸಂಚಾಲಕ ಡಾ.ಅರುಣ್ ಕುಮಾರ್, ತೊರೆನೂರು ಘಟಕದ ಅಧಕ್ಷ ಅರುಣ್ ಕುಮಾರ್ ಇತರರು ಇದ್ದರು.
Published on

ಕುಶಾಲನಗರ : ಕುಶಾಲನಗರ ತಾಲೂಕಿನ ಹೆಬ್ಬಾಲೆ ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಅರಣ್ಯ ಇಲಾಖೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಾಸುದೇವ ಮೇಟಿ ಬಣದ ಪದಾಧಿಕಾರಿಗಳು ಗುರುವಾರ ಸಂಜೆ ಚಿನ್ನೇನಹಳ್ಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಕಾಡಾನೆ ದಾಳಿಯಿಂದ ಚಿನ್ನೇನಹಳ್ಳಿ ಗ್ರಾಮದ ನಿವಾಸಿ ವೆಂಕಟಮ್ಮ ಗಂಭೀರವಾಗಿ ಗಾಯಗೊಂಡಿದ್ದರು. ಘಟನಾ ಸ್ಥಳಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಾಸುದೇವ ಮೇಟಿ ಬಣದ ಪದಾಧಿಕಾರಿಗಳು ಭೇಟಿ ನೀಡಿ, ಗಾಯಾಳು ಕುಟುಂಬಸ್ಥರು ಹಾಗೂ ಸ್ಥಳೀಯ ರೈತರಿಂದ ಮಾಹಿತಿ ಪಡೆದರು. ಕಾಡಾನೆಗಳ ಹಾವಳಿ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಕಾಡಾನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಸಮರ್ಪಕ ಯೋಜನೆ ಅನುಷ್ಠಾನಗೊಳಿಸದೆ ನಿರ್ಲಕ್ಷ್ಯ ವಹಿಸುತ್ತಿದೆ. ಸೋಲಾರ್ ಬೇಲಿ ಅಳವಡಿಕೆ ಹಾಗೂ ಕಂದಕಗಳ ನಿರ್ಮಾಣ ವಿಫಲವಾಗಿದೆ. ಆದ್ದರಿಂದ ರೈಲು ಕಂಬಿಗಳ ಬ್ಯಾರಿಕೆಡ್ ಅಳವಡಿಸಲು ಕ್ರಮವಹಿಸುವಂತೆ ಒತ್ತಾಯಿಸಿದರು.

ಗ್ರಾಮದೊಳಗೆ ಅಡ್ಡಾಡುತ್ತಿರುವ ಕಾಡಾನೆಗಳು ಈ ಭಾಗದಲ್ಲಿ ಬೆಳೆದ ಜೋಳ, ಸಿಹಿಗೆಣಸು, ಶುಂಠಿ ತಿಂದು ತುಳಿದು ನಾಶಪಡಿಸುತ್ತಿವೆ. ಗ್ರಾಮಪಂಚಾಯಿತಿ ಹಾಗೂ ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತವಾಗಿ ಗಮನಹರಿಸದೆ ನಿರ್ಲಕ್ಷ್ಯ ವಹಿಸಿದೆ ಎಂದು ಮಾಜಿ ಸೈನಿಕ ಪುಟ್ಟೇಗೌಡ ತಮ್ಮ ಅಸಮಾಧಾನ ಹೊರಹಾಕಿದರು.

ಸಂಘದ ಜಿಲ್ಲಾಧ್ಯಕ್ಷ ಎಚ್.ಜೆ.ಶರತ್, ಉಪಾಧ್ಯಕ್ಷ ಪ್ರಸನ್ನ ರೆಡ್ಡಿ, ಗೌರವಾಧ್ಯಕ್ಷ ಚಂದ್ರಣ್ಣ, ಕೊಡಗು-ಮೈಸೂರು ಜಿಲ್ಲಾ ಸಂಚಾಲಕ ಡಾ.ಅರುಣ್ ಕುಮಾರ್, ತೊರೆನೂರು ಘಟಕದ ಅಧಕ್ಷ ಅರುಣ್ ಕುಮಾರ್, ಗ್ರಾಮಸ್ಥರಾದ ಎಚ್.ಟಿ.ನಾಗರಾಜ್, ದಿಲೀಪ್ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net