ಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗದಮತೆ ಕ್ರಮಕೈಗೊಳ್ಳಿ

14-03-Shiva-6
ರಾಯಚೂರಿನ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಧ್ಯಕ್ಷತೆಯಲ್ಲಿ ಗುರುವಾರ ಬರ ನಿರ್ವಹಣೆ ಕುರಿತು ಸಭೆ ಜರುಗಿತು. ಸಚಿವ ಎನ್.ಎಸ್.ಬೋಸರಾಜು, ಶಾಸಕ ಬಸನಗೌಡ ದದ್ದಲ್, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ ಪಾಂಡ್ವೆ ಇದ್ದರು.
Published on

ರಾಯಚೂರು: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಅಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸೂಚಿಸಿದರು.
ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಬರ ನಿರ್ವಹಣೆ ಕುರಿತು ಗುರುವಾರ ಹಮ್ಮಿಕೊಂಡಿದ್ದ ಅಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಬರ ನಿರ್ವಹಣೆ ಕಾಮಗಾರಿಗಳನ್ನು ಸಮರ್ಪಕ ರೀತಿಯಲ್ಲಿ ನಿರ್ವಹಿಸಬೇಕು ಎಂದರು.
ತಾಲೂಕುವಾರು ಎಷ್ಟು ಕುಡಿಯುವ ನೀರಿನ ಕೆರೆಗಳಿವೆ. ಕೆರೆಗಳಿಗೆ ನೀರು ತುಂಬಿಸಲಾಗಿಯೇ ಎಂಬ ಮಾಹಿತಿ ಪಡೆದುಕೊಂಡು ನೀರಿನ ಸಮಸ್ಯೆಯಾಗದಂತೆ ಕೆರೆ ತುಂಬಿಸಲು ಕ್ರಮಕೈಗೊಳ್ಳಬೇಕು. ಸಹಾಯವಾಣಿಗೆ ಬರುವ ಕರೆಗಳಿಗೆ ಸಮರ್ಪಕ ರೀತಿಯಲ್ಲಿ ಸ್ಪಂದಿಸಿ ಸಮಸ್ಯೆ ಇತ್ಯರ್ಥಗೊಳಿಸಬೇಕು ಎಂದು ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದರು.
ಸಭೆಯಲ್ಲಿ ಸಚಿವ ಎನ್.ಎಸ್.ಬೋಸರಾಜು, ಶಾಸಕರಾದ ಬಸನಗೌಡ ದದ್ದಲ್, ಬಸನಗೌಡ ತುರ್ವಿಹಾಳ, ಹಂಪಯ್ಯ ನಾಯಕ, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ ಪಾಂಡ್ವೆ, ಎಸ್ಪಿ ಬಿ.ನಿಖಿಲ್ ಹಾಗೂ ವಿವಿಧ ಇಲಾಖೆ ಅಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net