ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ

8
Published on

ಮೈಸೂರು: ಗ್ರಾಮಾಂತರ ಪ್ರದೇಶ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿ ಗುರುವಾರ ಆಯೋಜಿಸಿದ್ದ ಕುಡಿಯುವ ನೀರಿನ ಸಮಸ್ಯೆ ಕುರಿತ ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳಿಗೆ ನಿರ್ದೇಶಿಸಿದರು.

ಮುಂದಿನ ಹದಿನೈದು ದಿನಗಳಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ವಿವರ ಪಡೆದು, ಸಮಸ್ಯೆ ಎದುರಿಸಲು ಕೈಗೊಳ್ಳಬೇಕಾದ ಕ್ರಮ ಕುರಿತು ನಿರ್ದೇಶನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net